ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ

images (8)
Published on

ಉಡುಪಿ: ರಾಷ್ಟ್ರೀಯ ಹೆದಾರಿ 169ಎ ತೀರ್ಥಹಳ್ಳಿ-&ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಸಂಭಾವ್ಯ ಭೂಕುಸಿತ ಹಿನ್ನೆಲೆಯಲ್ಲಿ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.


ತೀರ್ಥಹಳ್ಳಿಯಿಂದ ಉಡುಪಿಗೆ ಚಲಿಸುವ ಭಾರಿ ವಾಹನಗಳು ತೀರ್ಥಹಳ್ಳಿ-, ಮಾಸ್ತಿಕಟ್ಟೆ , -ಸಿದ್ದಾಪುರ- ಕುಂದಾಪುರ ಮಾರ್ಗ ಹಾಗೂ ಉಡುಪಿಯಿಂದ ತೀರ್ಥಹಳ್ಳಿಗೆ ಚಲಿಸುವ ಭಾರಿ ವಾಹನಗಳು ಉಡುಪಿ, -ಕುಂದಾಪುರ-, ಸಿದ್ದಾಪುರ-, ಮಾಸ್ತಿಕಟ್ಟೆ ಮಾರ್ಗವಾಗಿ ತೀರ್ಥಹಳ್ಳಿಗೆ ತೆರಳುವಂತೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net