ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ

Agumbe vvani
Published on

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಉಡುಪಿ ರಸ್ತೆಯ ಆಗುಂಬೆ ಘಾಟಿ ರಸ್ತೆಯಲ್ಲಿ ಅಕ್ಟೋಬರ್ 15ರವರೆಗೆ 12 ಟನ್‌ಗಿಂತ ಅಧಿಕ ಭಾರದ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ.

ಘಾಟಿ ರಸ್ತೆ ಕಿರಿದಾಗಿದ್ದು, ಮಳೆಗಾಲದಲ್ಲಿ ಭಾರಿ ಸರಕು ಸಾಗಾಟ ವಾಹನ ಸಂಚರಿಸುವುದರಿಂದ ರಸ್ತೆ ಬದಿಯ ಮಣ್ಣು ಕುಸಿದು, ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಬದಲಿ ಮಾರ್ಗ: ಉಡುಪಿ - ಸಿದ್ದಾಪುರ - ಹೊಸಂಗಡಿ - ಬಾಳೆಬರೇ ಘಾಟಿ ಹುಲಿಕಲ್- ಮಾಸ್ತಿಕಟ್ಟೆ- ತೀರ್ಥಹಳ್ಳಿ ಮಾರ್ಗವಾಗಿ ಶಿವಮೊಗ್ಗಕ್ಕೆ ಹಾಗೂ ಕಾರ್ಕಳ-ಹೆಬ್ರಿ-ಸಿದ್ಧಾಪುರ-ಹೊಸಂಗಡಿ-ಬಾಳೆಬರೆ ಘಾಟಿ -ಹುಲಿಕಲ್-ಮಾಸ್ತಿಕಟ್ಟೆ-ತೀರ್ಥಹಳ್ಳಿ-ಮಾರ್ಗವಾಗಿ ಶಿವಮೊಗ್ಗ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net