ಆಗುಂಬೆ ಘಾಟಿಯಲ್ಲಿ ಸೆಕೆಂಡ್ ಹ್ಯಾಂಡ್ ಕಾರು ಬೆಂಕಿಗಾಹುತಿ

WhatsApp Image 2021-09-19 at 6.07.50 PM (1)
Published on

ಶಿವಮೊಗ್ಗ: ಕಾರ್ಕಳದಲ್ಲಿ ಕಾರು ಖರೀದಿ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಆಗುಂಬೆ ಘಾಟಿಯಲ್ಲಿ ಹೊತ್ತಿ ಉರಿದಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶಿವಮೊಗ್ಗದ ಅರವಿಂದ್ ಎಂಬುವರು ಕಾರ್ಕಳದಲ್ಲಿ ಸೆಕೆಂಡ್‌ಹ್ಯಾಂಡ್ ಕಾರು ಖರೀದಿಸಿದ್ದರು. ಭಾನುವಾರ ತನ್ನಿಬ್ಬರು ಸ್ನೇಹಿತರೊಂದಿಗೆ ಕಾರ್ಕಳದಿಂದ ಆಗುಂಬೆ ಮಾರ್ಗವಾಗಿ ಸೆಕೆಂಡ್ ಹ್ಯಾಂಡ್ ಕಾರನ್ನು ತರುತ್ತಿದ್ದರು. ಈ ವೇಳೆ ಮೊದಲ ತಿರುವಿನಲ್ಲಿ ಹೊಗೆ ಕಾಣಿಸಿಕೊಂಡಿದ್ದು ತಕ್ಷಣವೇ ಜಾಗೃತರಾದ ಕಾರಿದ್ದವರು ಕೆಳಗಿಳಿದಿದ್ದರು.

ಸ್ವಲ್ಪ ಹೊತ್ತಿನಲ್ಲೇ ಬೆಂಕಿ ಕಾಣಿಸಿಕೊಂಡು ಇಡೀ ಕಾರು ಭಸ್ಮವಾಗಿದೆ. ಇದರಿಂದ ಆಗುಂಬೆ ಘಾಟಿಯಲ್ಲಿ ಒಂದು ಗಂಟೆಗೂ ಅಧಿಕ ಟ್ರಾಫಿಕ್ ಜಾಮ್ ಉಂಟಾಗಿತ್ತು. ಆಗುಂಬೆ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಜತೆಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net