ಆಗುಂಬೆ ಘಾಟಿಯಲ್ಲಿ ರಸ್ತೆ ಬಿರುಕು

IMG-20220717-WA0004
Published on

ಹೆಬ್ರಿ : ಆಗುಂಬೆ ಘಾಟಿಯ ನಾಲ್ಕನೇ ತಿರುವಿನಲ್ಲಿ ರಸ್ತೆ ಬಿರುಕುಗೊಂಡು ಮತ್ತೆ ಕುಸಿಯುವ ಭೀತಿ ಎದುರಾಗಿದೆ. ಕಳೆದ ಕೆಲವು ದಿನಗಳಿಂದ ಆಗುಂಬೆ ಘಾಟ್ ನಲ್ಲಿ ನಿರಂತರ ಮಳೆಯಾಗುತ್ತಿದ್ದು, ಮರಗಳು ಧರೆಗುರುಳಿವೆ ಮತ್ತೆ ನಿರಂತರ ಮಳೆಯಾದರೆ ಕೆಲವೆಡೆ ಮತ್ತಷ್ಟು ಕುಸಿಯುವ ಭೀತಿ ಎದುರಾಗಿದೆ.

ಕಳೆದ ಒಂದು ವಾರದ ಹಿಂದೆ ಇದೇ ಸ್ಥಳದಲ್ಲಿ ಭೂಕುಸಿತ ಉಂಟಾಗಿತ್ತು. ಜಿಲ್ಲಾಡಳಿತ ಈಗಾಗಲೇ ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ ನೀಡಿದ್ದು, ಪ್ರಯಾಣಿಕರು ಜಾಗ್ರತೆ ವಹಿಸುವ ಅಗತ್ಯವಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net