

ಆನೇಕಲ್ : ತಾಲೂಕಿನ ಅತ್ತಿಬೆಲೆಯಲ್ಲಿ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶ್ರೀನಿವಾಸ್ ನಗರ ಶಾಖಾ ಮಠ ಮತ್ತು ಬೆಂಗಳೂರಿನ ಅಹಲ್ಯಾಬಾಯಿ ಹೋಳ್ಕರ್ ಮಹಿಳಾ ಸಂದಿಂದ ಅಹಲ್ಯಾಬಾಯಿ ಹೋಳ್ಕರ್ 300ನೇ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಜ್ಯೋತಿ ಯಾತ್ರೆಯು ತಾಲೂಕಿನ ಗಡಿಭಾಗ ಅತ್ತಿಬೆಲೆಗೆ ಬುಧವಾರ ಆಗಮಿಸಿತು.
ಬೆಂಗಳೂರು ನಗರ ಮತ್ತು ಬೆಂ.ಗ್ರಾಮಾಂತರ ಜಿಲ್ಲೆಯ ವಿವಿಧಡೆ ಜ್ಯೋತಿಯತ್ರಿಯು ಸಂಚರಿಸಲಿದ್ದು, ಬುಧವಾರ ಅತ್ತಿಬೆಲೆ, ಆನೇಕಲ್, ಜಿಗಣಿ ಮತ್ತು ಬೊಮ್ಮಸಂದ್ರದಲ್ಲಿ ಸಂಚರಿಸಿತು. ಅತ್ತಿಬೆಲೆಯ ಬೀರೇಶ್ವರ ಸ್ವಾಮಿ ದೇವಾಲಯದ ಬಳಿ ಜ್ಯೋತಿ ಯಾತ್ರೆಯನ್ನು ಬರಮಾಡಿಕೊಳ್ಳಲಾಯಿತು.
ಮೇ 22 ರಿಂದ 30ರವರೆಗೆ ನಗರ ಮತ್ತು ಗ್ರಾಮಾಂತರ ಜಿಲ್ಲೆಯ ವಿವಿಧಡೆ ಜ್ಯೋತಿಯಾತ್ರೆ ಸಂಚರಿಸಿ 31 ರಂದು ಬೆಂಗಳೂರಿನ ರವೀಂದ್ರ ಕಲಾೇತ್ರದಲ್ಲಿ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕನಕಗುರು ಪೀಠ ತಿಂಥಣಿಬ್ರಿಜ್ನ ಸಿದ್ದರಾಮಾನಂದ ಸ್ವಾಮೀಜಿ ಮಾತನಾಡಿ, 31ರಂದು ಬೆಂಗಳೂರಿನ ರವೀಂದ್ರ ಕಲಾೇತ್ರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಹಲವು ಮುಖಂಡರು ಭಾಗವಹಿಸಲಿದ್ದಾರೆ. ಅಹಲ್ಯಾಬಾಯಿ ಹೋಳ್ಕರ್ ಬಗ್ಗೆ ಜನಜಾಗೃತಿ ಮೂಡಿಸುವ ಸಲುವಾಗಿ ಜ್ಯೋತಿ ಯಾತ್ರೆ ಆಯೋಜಿಸಲಾಗಿದೆ ಎಂದರು.
ಹಿಂದುಳಿದ ಜಾತಿಗಳ ಒಕ್ಕೂಟದ ನಿರ್ದೇಶಕ ನರಸಿಂಹಮೂರ್ತಿ ಮಾತನಾಡಿ, ಅಹಲ್ಯಾಬಾಯಿ ಹೋಳ್ಕರ್ ಅವರು ಭಾರತದ ಎಲಿಜಬೆತ್ ಎಂದೇ ಖ್ಯಾತಿ ಪಡೆದಿದ್ದಾರೆ. ದೇವಾಲಯಗಳನ್ನು ಸ್ಥಾಪನೆ ಮಾಡಿ ಧಾರ್ಮಿಕ ಪ್ರೆಯನ್ನು ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅನ್ಯ ಧರ್ಮರ ದಾಳಿಗೊಳಗಾದ 12 ಜ್ಯೋರ್ತಿಲಿಂಗಗಳ ಜೀಣೋರ್ದ್ಧಾರ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಅಹಲ್ಯಾಬಾಯಿ ಹೋಲ್ಕರ್ ಅವರು ಅನ್ನಚತ್ರ, ಧರ್ಮ ಶಾಲೆ, ಕಲ್ಯಾಣಿ ನಿರ್ಮಿಸುವ ಮೂಲಕ ಸಾಮಾಜಿಕ ಪರಿಕಲ್ಪನೆಯನ್ನು ನೀಡಿದ್ದಾರೆ. ಭಾರತದ ಇತಿಹಾಸದಲ್ಲಿಯೇ ಮೊದಲ ಬಾರಿ ಮಹಿಳಾ ಸೈನ್ಯ ಕಟ್ಟಿದ ಕೀರ್ತಿ ಅಹಲ್ಯಬಾಯಿ ಹೊಳ್ಕರ್ ಅವರಿಗೆ ಸಲ್ಲುತ್ತದೆ ಎಂದರು.