ಬಿಜೆಪಿ ವಿರುದ್ಧ ಅಹಿಂದ ಸಂಘಟನೆಗಳ ಆಕ್ರೋಶ

7 ckm 6
ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಅಹಿಂದ ಸಂಘಟನೆಗಳು ರಾಜ್ಯ ಸರ್ಕಾರವನ್ನು ಅಸ್ತಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಎಚ್.ಡಿ.ತಮ್ಮಯ್ಯ, ಜಿ.ಎಚ್.ಶ್ರೀನಿವಾಸ್, ರೇಖಾ ಹುಲಿಯಪ್ಪ ಗೌಡ, ಎಚ್.ಎಚ್.ದೇವರಾಜ್, ಡಾ.ಅಂಶುಮAತ್ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಶೋಷಿತ ಹಾಗೂ ಎಲ್ಲ ವರ್ಗದ ನಾಯಕರಾದ ಅಹಿಂದ ನಾಯಕ ಸಿದ್ದರಾಮಯ್ಯ ಅವರನ್ನು ಅಹಿಂದ ಎಂಬ ಕಾರಣಕ್ಕೆ ಅಧಿಕಾರದಿಂದ ಕೆಳಗಿಳಿಸಲು ಕೇಂದ್ರ ಸರ್ಕಾರ ಸೇರಿದಂತೆ ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನೇತೃತ್ವದಲ್ಲಿ ವಿವಿಧ ಅಹಿಂದ ಸಂಘಟನೆಗಳ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್ ವೃತ್ತದವರೆಗೆ ಮೆರವಣಿಗೆ ನಡೆಸಿ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ರಾಜ್ಯದಲ್ಲಿ ಅಧಿಕಾರದಲ್ಲಿರುವು ಏಳು ಕೋಟಿ ಜನರ ಸರ್ಕಾರ. ೧೩೬ ಜನ ಶಾಸಕರನ್ನು ಜನ ಗೆಲ್ಲಿಸಿದ್ದಾರೆ. ಹೀಗಾಗಿ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಿರುವ ಸಂವಿಧಾನಿಕ ಸರ್ಕಾರ ನಮ್ಮದು. ಆದರೆ ರಾಜ್ಯಪಾಲರು ಕೇಂದ್ರಸರ್ಕಾರದ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದಾರೆ. ದೂರುಕೊಟ್ಟ ವ್ಯಕ್ತಿಯ ಹಿನ್ನೆಲೆ ನೀಡಬೇಕಿತ್ತು. ಬೆಳಗ್ಗೆ ೧೧ಗಂಟೆಗೆ ದೂರು ನೀಡಿದರೆ ರಾತ್ರಿ ೧೦ ಗಂಟೆ ಒಳಗಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ್ದಾರೆ. ಇದು ಕಾನೂನು ಬಾಹಿರ. ಹೀಗಾಗಿ ರಾಜ್ಯಪಾಲರು ತಾವು ನೀಡಿದ ನೋಟೀಸ್ ಕೂಡಲೇ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.
ತರೀಕೆರೆ ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ, ಬಿಜೆಪಿ ಪದೇ ಪದೇ ಸುಳ್ಳನ್ನು ಹೇಳುವ ಮೂಲಕ ಸುಳ್ಳನ್ನೇ ಸತ್ಯ ಮಾಡಲು ಹೊರಟಿದೆ. ಬಿಜೆಪಿ ಬಗ್ಗೆ ಜನ ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದಲ್ಲಿ ಜನರಿಗೆ ಮೋಸ ಮಾಡಲು ಬಿಜೆಪಿ ಸನ್ನದ್ಧವಾಗಿದೆ. ಇದರ ಮೊದಲ ಹಂತವಾಗಿ ಸರ್ಕಾರವನ್ನು ಅಸ್ತಿರಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಜನಪರ ಸರ್ಕಾರ ಅಧಿಕಾರದಲ್ಲಿದೆ. ಸರ್ಕಾರದ ಜನಪ್ರಿಯತೆ ಸಹಿಸದ ಬಿಜೆಪಿ ರಾಜ್ಯಸರ್ಕಾರಕ್ಕೆ ಸಂಕಷ್ಟ ತರಲು ಹಾಗೂ ಸಿಎಂ ಸಿದ್ಧರಾಮಯ್ಯ ಅವರಿಗೆ ಅಪಮಾನ ಮಾಡಲು ಪ್ರಯತ್ನಿಸುತ್ತಿವೆ. ಹೀಗಾಗಿ ಬಿಜೆಪಿ ವಿರುದ್ಧ ರಾಜ್ಯಾದ್ಯಂತ ಅಹಿಂದ ಸಂಘಟನೆಗಳ ನೇತೃತ್ವದಲ್ಲಿ ಹೋರಾಟ ನಡೆಸುತ್ತಿz್ದೆÃವೆ ಎಂದರು.
ಬಿಜೆಪಿ ಹಾಗೂ ಕಾಂಗ್ರೆಸ್ಸಿಗರಿಗೆ ಸಿಎಂ ಸಿದ್ದರಾಮಯ್ಯ ಅವರನ್ನು ಮುಟ್ಟುವುದು ಸಾಧ್ಯವಿಲ್ಲ. ಈ ಹೋರಾಟದ ಮುಂದುವರಿದ ಭಾಗವಾಗಿ ಮೈಸೂರಿನಲ್ಲಿ ಜನಾಂದೋಲನ ಸಮಾವೇಶ ನಡೆಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಜನ ಭಾಗವಹಿಸಿ ಸರ್ಕಾರಕ್ಕೆ ಸ್ಥೆÊರ್ಯ ತುಂಬುವ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು ಎಂದು ಕರೆ ನೀಡಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಅಂಶುಮAತ್ ಮಾತನಾಡಿ, ಸಿದ್ದರಾಮಯ್ಯ ಅವರು ಜನಪರ ಆಡಳಿತ ನೀಡುವ ಜೊತೆಗೆ ಪ್ರತಿ ಮನೆಗೆ ತಲುಪುವ ಕಾರ್ಯಕ್ರಮ ರೂಪಿಸಿದ್ದಾರೆ. ಇದನ್ನು ಸಹಿಸದ ಬಿಜೆಪಿ ಜನರ ದಿಕ್ಕುತಪ್ಪಿಸಲು ಸುಳ್ಳು ಹೇಳಲಾರಂಭಿಸಿದ್ದಾರೆ. ಬಿಜೆಪಿ, ಜೆಡಿಎಸ್ ಸೇರಿ ಮೂಡಾ ಹಗರಣ ಸೃಷ್ಟಿಸಿ ಆರೋಪ ಮಾಡುತ್ತಿದ್ದಾರೆ. ಅವರ ಪಾದಯಾತ್ರೆ ಕೇವಲ ರಾಜಕೀಯ ಪೇರಿತವಾಗಿದೆ ಎಂದರು.
ಬಿಜೆಪಿ ಸರ್ಕಾರದ ದುರಾಡಳಿತ ಹಾಗೂ ಭ್ರಷ್ಟಾಚಾರದ ವಿರುದ್ಧ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಜೋಡೆತ್ತುಗಳಂತೆ ಹೋರಾಟ ರೂಪಿಸಿದ್ದರು. ಇದೇ ಕಾರಣದಿಂದಲೇ ಜನ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದರು. ಈಗಲೂ ನಾವು ಒಗ್ಗಟ್ಟಾಗಿz್ದÉÃವೆ. ಆದರೆ ಬಿಜೆಪಿ ಹಾಗೂ ಜೆಡಿಎಸ್ ಜನ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಅವರಿಗೆ ಅನುಕೂಲ ಒದಗಿಸುವುದನ್ನು ಬಿಟ್ಟು ರಾಜಕೀಯ ಕಾರಣಕ್ಕಾಗಿ ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಸಚಿವ ಬಿ.ಬಿ.ನಿಂಗಯ್ಯ ಮಾತನಾಡಿ, ಮೂಲಭೂತವಾದಿಗಳು ಕೇಂದ್ರ ಸರ್ಕಾರವನ್ನು ಬಳಸಿಕೊಂಡು ರಾಜ್ಯಪಾಲರ ಮೂಲಕ ನೋಟೀಸ್ ಕೊಡಿಸಿ ಸಿದ್ದರಾಮಯ್ಯ ಅವರ ಸರ್ಕಾರವನ್ನು ಅಸ್ತಿರಗೊಳಿಸಲು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಎಚ್.ಎಚ್.ದೇವರಾಜ್, ಮಂಜೇಗೌಡ, ರೇಖಾ ಹುಲಿಯಪ್ಪ ಗೌಡ, ಪ್ರಮುಖರಾದ ಮರ್ಲೆ ಅಣ್ಣಯ್ಯ, ಡಿ.ಸಿ ಪುಟ್ಟೇಗೌಡ, ಕೆ.ಎಂ ಮಂಜುನಾಥ್, ನಾರಾಯಣ, ರಮೇಶ್, ಔರಂಗ ಪಾಷ, ಮುನೀರ್, ಪರಮೇಶ್, ಮಲ್ಲೇಶ್‌ಸ್ವಾಮಿ, ಜೇಮ್ಸ್ ಡಿಸೋಜ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net