ಜೂ.29 ರಂದು ಅಹಿಂದ ರತ್ನ ಪ್ರಶಸ್ತಿ ಪೂರ್ವಭಾವಿ ಸಭೆ

BASAPPA
BASAPPA
Published on

ರಾಯಚೂರು ಅಹಿಂದ ಕರ್ನಾಟಕ ಅಲ್ಪ ಸಂಖ್ಯಾತರ ಹಿಂದುಳಿದ ದಲಿತರ ಒಕ್ಕೂಟದಿಂದ ರಾಜ್ಯಮಟ್ಟದ ಕರ್ನಾಟಕದ ಅಹಿಂದ ರತ್ನ ಪ್ರಶಸ್ತಿ-2025 ರ ಪೂರ್ವಭಾವಿ ಸಭೆಯನ್ನು ಜೂ.29 ರಂದು ನಗರದ ಸರ್ಕಾರಿ ನೌಕರರ ಸಂಘದ ಭವನದಲ್ಲಿ ಹಮ್ಮಿಕೊಳ್ಳಲಾಗಿದೆಂದು ಸಂಘದ ಜಿಲ್ಲಾಧ್ಯಕ್ಷ ಬಸಪ್ಪ ಕಾರಮಂಚಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕನ್ನಡಪರ, ಹಿಂದುಳಿದ ವರ್ಗ ಸಮಾಜದ ಸಂಘಟನೆ, ರೈತ ಸಂಘಟನೆಗಳಲ್ಲಿ ರಾಜಕೀಯ, ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಮಾಡಿರುವ ಕಲ್ಯಾಣ ಕರ್ನಾಟಕ ಭಾಗದ ಸಾಧಕರಿಗೆ ರಾಜ್ಯ ಮಟ್ಟದ ಕರ್ನಾಟಕ ಅಹಿಂದ ರತ್ನ ಪ್ರಶಸ್ತಿ-2025 ನೀಡಿ ಗೌರವಿಸಲು ಪೂರ್ವಾಭಾವಿ ಸಭೆ ಕರೆಯಲಾಗಿದೆ. ಸಭೆಗೆ ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಅಹಿಂದ ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಷಿನ ಸಂಖ್ಯೆಯಲ್ಲಿ ಭಾಗವಹಿಸಿ ಯಸಶ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯಾಧ್ಯಕ್ಷ ವೆಂಕಟೇಶ, ಜಿಲ್ಲಾ ಉಪಾಧ್ಯಕ್ಷ ಕೆ.ಬಸಪ್ಪ, ಜಿಲ್ಲಾ ಕಾರ್ಯಾಧ್ಯಕ್ಷ ಶಿವರಾಜ ಜಾನೇಕಲ್, ಶಿವರಾಜ ಬಡಿಗೇರ, ಎಂ.ಡಿ.ಮುಸ್ತಾಫ, ಹುಲುಗಪ್ಪ ನಾಯಕ ಇದ್ದರು.

 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net