

ಬೆಳಗಾವಿ: ಆಧುನಿಕ ಕೃಷಿ ಪದ್ಧತಿ ಭಾಗವಾಗಿರುವ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ವಿವಿಧ ಬೆಳೆಗಳ ಮೇಲ್ವಿಚಾರಣೆ ಮಾಡಲು ಸಹಾಯವಾಗುತ್ತದೆ ಎಂದು ಕೆಎಲ್ಇ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಮಂಜುನಾಥ ಚೌರಡ್ಡಿ ಅಭಿಪ್ರಾಯಪಟ್ಟರು.
ಬೈಲಹೊಂಗಲ ತಾಲೂಕಿನ ಮತ್ತಿಕೊಪ್ಪದ ಕೆಎಲ್ಇ ಕೃಷಿ ವಿಜ್ಞಾನ ಕೇಂದ್ರದಲ್ಲಿ ಈಚೆಗೆ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಉಪಯೋಗಿಸಿ ಬೆಳೆ ನಿರ್ವಹಣೆ ಕುರಿತು ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಎಜಿ ಕ್ರೇನ್ ಸ್ಮಾರ್ಟ್ ಆಪ್ಸ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಗತ್ ಸಿ. ಮಾತನಾಡಿ, ಬೆಳೆಗಳಲ್ಲಿ ಎಐ ತಂತ್ರಜ್ಞಾನ ಬಳಸುವ ಮೂಲಕ ಅಧಿಕ ಇಳುವರಿ ಪಡೆಯಬಹುದು ಎಂದು ತಿಳಿಸಿದರು. ಡಾ.ಎಸ್.ಎಸ್.ಹಿರೇಮಠ, ಎಸ್.ಎಂ.ವಾರದ, ಪ್ರವಿಣ ಯಡಹಳ್ಳಿ ಇತರರಿದ್ದರು.