ಪಟಾಕಿ ಮಾರಾಟಕ್ಕೆ ನಿಯಮ ಉಲ್ಲಂಘಿಸಿ ಅನುಮತಿ

31102022 raichur allappa
Published on

ರಾಯಚೂರು: ದೇವದುರ್ಗದಲ್ಲಿ ನಿಯಮ ಮೀರಿ ಸುರಕ್ಷತಾ ಕ್ರಮಗಳಿಲ್ಲದೆ ಪಟಾಕಿ ಮಾರಾಟ ಮಾಡುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮಕೈಗೊಳ್ಳದೆ ನಿರ್ಲಕ್ಷೃ ವಹಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಅಳ್ಳಪ್ಪ ಆರೋಪಿಸಿದರು.

ಸ್ಥಳೀಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ದೇವದುರ್ಗದ ಅಂಬೇಡ್ಕರ್ ವೃತ್ತದಿಂದ ಗಾಂಧಿ ವೃತ್ತದವರೆಗೆ ರಸ್ತೆ ಬದಿಯಲ್ಲಿಯೇ ಪಟಾಕಿ ಮಾರಾಟ ಮಾಡಲಾಗುತ್ತಿದೆ. ಇದರಿಂದ ಯಾವುದೇ ಅವಘಡ ನಡೆದಲ್ಲಿ ಪ್ರಾಣಹಾನಿ ಆಗುವ ಸಂಭವವಿದ್ದು, ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ, ತಹಸೀಲ್ದಾರ್ ಸೇರಿದಂತೆ ಇತರ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರಿಗೆ ದೂರು ಸಲ್ಲಿಸಲಾಗಿದೆ ಎಂದರು.

ನಿರ್ಲಕ್ಷೃ ವಹಿಸಿರುವ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸುವ ಮೂಲಕ ಶಿಸ್ತು ಕ್ರಮಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಪಟಾಕಿ ಮಾರಾಟಕ್ಕೆ ಸುರಕ್ಷಿತ ಸ್ಥಳವನ್ನು ಗುರುತಿಸಬೇಕು ಎಂದು ಅಳ್ಳಪ್ಪ ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net