ಎಲ್ಲೆಡೆ ಕನ್ನಡ ಬಾವುಟ ಹಾರಿಸುವಂತಾಗಲಿ

31102022 raichur tamesh
Published on

ರಾಯಚೂರು: ರಾಜ್ಯದ ಎಲ್ಲ ಶಾಲೆ, ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಧ್ವಜ ಹಾರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಬೇಕೆಂದು ಅಖಿಲ ಕರ್ನಾಟಕ ಭುವನೇಶ್ವರಿ ಸೇನಾ ಸಮಿತಿ ಸಂಸ್ಥಾಪಕ ತಮೇಶ ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ ಎಂಬ ನಿಟ್ಟಿನಲ್ಲಿ ಕನ್ನಡ ಧ್ವಜ ಹಾರಿಸಲು ಆದೇಶಿಸಬೇಕು. ಎಲ್ಲ ಹೋಟೆಲ್‌ಗಳು, ಮಾಲ್‌ಗಳು ಸೇರಿದಂತೆ ಎಲ್ಲ ಅಂಗಡಿ ಮುಂಗಟ್ಟುಗಳ ನಾಮ ಫಲಕದಲ್ಲಿ ಕನ್ನಡ ಭಾಷೆ ಬಳಸುವಂತೆ ಕಟ್ಟು ನಿಟ್ಟಿನ ನಿಯಮ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ನರಸಿಂಹಲು, ಸಂಘಟನಾ ಕಾರ್ಯದರ್ಶಿ ವಾಗುಲು ನರಸಿಂಹಲು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net