

ರಾಮದುರ್ಗ: ಡಾ.ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ನಿರ್ಗತಿಕರು ಹಾಗೂ ಅಸಹಾಯಕ ಕುಟುಂಬಗಳಿಗೆ ಜೀವನ ನಿರ್ವಹಣೆಗಾಗಿ ಧರ್ಮಸ್ಥಳ ಸಂಸ್ಥೆಯಿಂದ ಮಾಸಿಕ 1,000&5,000 ರೂ. ವರೆಗೆ ಮಾಸಾಶನ ನೀಡಲಾಗುತ್ತಿದೆ ಎಂದು ಧಗ್ರಾಯೋ ಜಿಲ್ಲಾ ನಿರ್ದೇಶಕ ಎಚ್.ಆರ್.ಲವಕುಮಾರ ಹೇಳಿದರು.
ಪಟ್ಟಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆ ಈಚೆಗೆ ಹಮ್ಮಿಕೊಂಡಿದ್ದ ನಿರ್ಗತಿಕ ಕುಟುಂಬಗಳಿಗೆ ವಾತ್ಸಲ್ಯ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅನಾಥ, ದುರ್ಬಲ ಕುಟುಂಬಗಳಿಗೆ ಅನುಕೂಲವಾಗುವ ಸದುದ್ದೇಶದಿಂದ ಯೋಜನೆ ರೂಪಿತವಾಗಿದೆ. ಗ್ರಾಮಾಭಿವೃದ್ಧಿ, ಮಹಿಳಾ ಸ್ವಸಹಾಯ ಸಂಗಳಿಗೆ ಸಾಲ ಸೌಲಭ್ಯ ಸೇರಿ ಹತ್ತಾರು ಜನಪರ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು. ತಾಲೂಕಿನ ಒಟ್ಟು 12 ನಿರ್ಗತಿಕ ಕುಟುಂಬಗಳಿಗೆ ವಾತ್ಸಲ್ಯ ಕಿಟ್ ವಿತರಿಸಲಾಯಿತು. ಅಶೋಕ ಕುಲಗೋಡ, ರಮೇಶ ಜಲಗೇರಿ, ತಾಲೂಕು ಯೋಜನಾಧಿಕಾರಿ ಸಚಿನ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸುನೀತಾ ಬಡಿಗೇರ, ವಲಯ ಮೇಲ್ವಿಚಾರಕ ಬಸಪ್ಪ, ಸಂತೋಷ ಕೆ. ಇತರರು ಇದ್ದರು.