ವೇಣುಧ್ವನಿ 90.4 ಎಫ್‌ಎಂನಿಂದ ಏಡ್ಸ್ ಜಾಗೃತಿ

IMG20241130203653.jpg
Published on

ಬೆಳಗಾವಿ: ಬೆಳಗಾವಿ ಕೆಎಲ್‌ಇ ವೇಣುಧ್ವನಿ 90.4 ಎಫ್.ಎಂ. ಸಮುದಾಯ ಬಾನುಲಿ ಕೇಂದ್ರದಲ್ಲಿ ವಿಶ್ವ ಏಡ್ಸ್ ದಿನದ ಕುರಿತು ಕೆಎಲ್‌ಇ ಆಸ್ಪತ್ರೆ ಹಾಗೂ ಕೆಎಲ್‌ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಸಹಯೋಗದಲ್ಲಿ ಜಾಗೃತಿಯ ನೇರ ಫೋನ್-ಇನ್ ಕಾರ್ಯಕ್ರಮ ಶನಿವಾರ ಜರುಗಿತು.

ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ತಜ್ಞ ವೈದ್ಯ ಡಾ. ಜಯಪ್ರಕಾಶ ಅಪ್ಪಾಜಿಗೋಳ ಅವರು ಬೆಳಗ್ಗೆ 10ರಿಂದ 11ಗಂಟೆ ವರೆಗೆ ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿ, ಜಾಗೃತಿ ಮೂಡಿಸಿದರು. ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನಿಷಾ ಪಿ.ಎಸ್. ಮತ್ತು ಅನುಪಮಾ ಕಾರ್ಯಕ್ರಮ ನಡೆಸಿಕೊಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net