ರೌಡಿಶೀಟರ್ ಮನೆಗಳ ಮೇಲೆ ದಾಳಿ

h22-roudi
Published on

ಹುಬ್ಬಳ್ಳಿ: ಹು-ಧಾ ಪೊಲೀಸ್ ಆಯುಕ್ತಾಲಯದ ಉತ್ತರ, ದಕ್ಷಿಣ ಹಾಗೂ ಧಾರವಾಡ ಉಪ ವಿಭಾಗ ವ್ಯಾಪ್ತಿಯ ಒಟ್ಟು 172 ರೌಡಿಶೀಟರ್ ಮನೆಗಳ ಮೇಲೆ ಮಂಗಳವಾರ ಹಾಗೂ ಬುಧವಾರ ಪೊಲೀಸರು ದಿಢೀರ್ ದಾಳಿ ನಡೆಸಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಬೆಂಡಿಗೇರಿ ಪೊಲೀಸ್ ಠಾಣೆಯ ರೌಡಿಶೀಟರ್ ಷಣ್ಮುಗ ರವೀಂದ್ರ ಗುಡಿಹಾಳ ಎಂಬಾತನ ಮನೆಯಲ್ಲಿ ಮಾರಕಾಸ್ತ್ರಗಳು ಸಿಕ್ಕಿದ್ದು, ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ಒಟ್ಟು 5 ರೌಡಿಶೀಟರ್‌ಗಳ ಮೇಲೆ ಸಿಆರ್‌ಪಿಸಿ ಕಾಯ್ದೆಯಡಿ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ. ವಿವಿಧ ಪ್ರಕರಣಗಳಲ್ಲಿ ವಾರಂಟ್ ಜಾರಿಯಾಗಿದ್ದರೂ ತಲೆ ಮರೆಸಿಕೊಂಡಿದ್ದ ಮೂವರು ರೌಡಿಶೀಟರ್‌ಗಳು ಸಿಕ್ಕಿಬಿದ್ದಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅಪರಾಧ ಕೃತ್ಯಗಳಲ್ಲಿ ತೊಡಗದಂತೆ ಕೆಲವರಿಗೆ ಎಚ್ಚರಿಕೆ ನೀಡಿ, ಮುಚ್ಚಳಿಕೆ ಪತ್ರ ಬರೆಸಿಕೊಳ್ಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net