ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಎಐಡಿಎಸ್‌ಒ ಪ್ರತಿಭಟನೆ

12 Dwd 1
Published on

ಧಾರವಾಡ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಭ್ರಷ್ಟಾಚಾರ ನಡೆದಿದ್ದು, ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ ಆರ್ಗನೈಸೇಶನ್ (ಎಐಡಿಎಸ್‌ಒ) ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕಲಾಭವನ ಮೈದಾನದಿಂದ ವಿವೇಕಾನಂದ ವೃತ್ತದವರೆಗೆ ನಡೆದ ಬೃಹತ್ ಮೆರವಣಿಗೆಯಲ್ಲಿ ವಿವಿಧ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಎಐಡಿಎಸ್‌ಒ ರಾಜ್ಯ ಕಾರ್ಯಕಾರಿ ಸದಸ್ಯ ಹಯ್ಯಾಳಪ್ಪ ಮಾತನಾಡಿ, ಜೂ. 4ರಂದು ಪ್ರಕಟಗೊಂಡ ಪರೀಕ್ಷಾ ಫಲಿತಾಂಶದ ಪಾರದರ್ಶಕತೆಯ ಕುರಿತು ದೇಶವ್ಯಾಪಿ ವಿದ್ಯಾರ್ಥಿಗಳು ಹಾಗೂ ಪಾಲಕರು ಪ್ರಶ್ನೆ ಎತ್ತಿದ್ದಾರೆ. ಯುಜಿಸಿ ಪರೀಕ್ಷಾ ಮಾರ್ಗಸೂಚಿ ಅನ್ವಯ ಅಂಕ ನೀಡಿಕೆಯಲ್ಲಿ ಹೊಂದಿಕೆಯಾಗುತ್ತಿಲ್ಲ. ಕೆಲ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅಂಕ ನೀಡಿರುವುದಾಗಿ ಎನ್‌ಟಿಎ ಸಮಜಾಯಿಷಿ ನೀಡಿದೆ. ಆದರೆ, ಹೆಚ್ಚುವರಿ ಅಂಕ ನೀಡಿರುವ ಮಾನದಂಡ ಪಕ್ಷಪಾತವಾಗಿದೆ. ಸೂಕ್ತ ನ್ಯಾಯಾಂಗ ತನಿಖೆ ನಡೆಸಬೇಕು ಎಂದರು.
ಸAಘಟನೆಯ ಜಿಲ್ಲಾ ಅಧ್ಯಕ್ಷೆ ಸಿಂಧು ಕೌದಿ ಮಾತನಾಡಿ, ಸರ್ಕಾರದ ನಿಷ್ಕ್ಕಾಳಜಿ ಮತ್ತು ಪರೀಕ್ಷಾ ವ್ಯವಸ್ಥೆಯ ವ್ಯಾಪಾರೀಕರಣದಿಂದ ಅಮಾಯಕ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದರು.
ಸAಘಟನೆಯ ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಮೇಟಿ, ಉಪಾಧ್ಯಕ್ಷ ಚಂದ್ರು, ಕಾರ್ಯಕಾರಿ ಸದಸ್ಯ ವಿನಯ ಹಾಗೂ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net