ಎಐಡಿಎಸ್‌ಒನಿಂದ ಅಖಿಲ ಭಾರತ ಪ್ರತಿಜ್ಞಾ ದಿನಾಚರಣೆ

15
Published on

ಮೈಸೂರು: ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಪಶ್ಚಿಮ ಬಂಗಾಳ ಸರ್ಕಾರ ನಡೆಸಿದ ಕ್ರೂರ ದಾಳಿ ಖಂಡಿಸಿ ಎಐಡಿಎಸ್‌ಒನಿಂದ ನಗರದಲ್ಲಿ ಮಂಗಳವಾರ ಅಖಿಲ ಭಾರತ ಪ್ರತಿಜ್ಞಾ ದಿನ ಆಚರಿಸಲಾಯಿತು.

ಮಹಾರಾಜ ಹಾಗೂ ಯುವರಾಜ ಕಾಲೇಜಿನಲ್ಲಿ ಅಖಿಲ ಭಾರತ ಪ್ರತಿಜ್ಞಾ ದಿನ ಆಚರಿಸುವ ಮೂಲಕ ಪಶ್ಚಿಮ ಬಂಗಾಳದ ಜಾಧವಪುರ ವಿಶ್ವವಿದ್ಯಾಲಯದಲ್ಲಿ ಚುನಾವಣೆ ನಡೆಸಲು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ, ಅಲ್ಲಿನ ಶಿಕ್ಷಣ ಮಂತ್ರಿ ಕಾರು ಹರಿಸಿದ್ದಾರೆ ಎಂದು ಆರೋಪಿಸಿದರು.

ಎಐಡಿಎಸ್‌ಒನ ಪಶ್ಚಿಮ ಬಂಗಾಳ ರಾಜ್ಯ ಸಮಿತಿ ಸೋಮವಾರ ರಾಜ್ಯವ್ಯಾಪಿ ಕಾಲೇಜು ಮತ್ತು ವಿಶ್ವವಿದ್ಯಾಲಯ ಬಹಿಷ್ಕಾರಕ್ಕೆ ಕರೆ ನೀಡಿತ್ತು. ಪಶ್ಚಿಮ ಬಂಗಾಳದ ವಿದ್ಯಾರ್ಥಿ ಸಮುದಾಯ ಈ ಕರೆಗೆ ಓಗೊಟ್ಟು ಯಶಸ್ವಿಯಾಗಿ ನಡೆಸಿದ್ದಾರೆ. ಅಪರಾಧಿಗಳಿಗೆ ಶಿಕ್ಷೆ ವಿಧಿಸಬೇಕು, ಕ್ಯಾಂಪಸ್‌ಗಳಲ್ಲಿ ಬೆದರಿಕೆ ಮತ್ತು ಭ್ರಷ್ಟಾಚಾರದ ಸಂಸ್ಕೃತಿಗೆ ಅಂತ್ಯ ಹಾಡಬೇಕೆಂದು ಆಗ್ರಹಿಸಿದರು.

ಪಶ್ಚಿಮ ಬಂಗಾಳದಲ್ಲಿ ಪರೀಕ್ಷಾರ್ಥಿಗಳನ್ನು ಹೊರತುಪಡಿಸಿ, ಎಲ್ಲ ವಿದ್ಯಾರ್ಥಿಗಳು ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ತರಗತಿಗಳನ್ನು ಸ್ವಯಂಪ್ರೇರಿತರಾಗಿ ಬಹಿಷ್ಕರಿಸಿ ಬೆಂಬಲ ನೀಡಿದ್ದಾರೆ ಎಂದರು. ಸಮಿತಿಯ ಜಿಲ್ಲಾ ಕಾರ್ಯದರ್ಶಿ ನಿತಿನ್, ಜಿಲ್ಲಾ ಉಪಾಧ್ಯಕ್ಷೆ ಸ್ವಾತಿ, ಪದಾಧಿಕಾರಿಗಳಾದ ಚೆಲುವ, ಜ್ಞಾನೇಶ್ವರ್, ಮಹಾರಾಜ, ಯುವರಾಜ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net