ಏಮ್ಸ್ ಹೋರಾಟಕ್ಕೆ ನಾಲ್ಕನೇ ವರ್ಷಕ್ಕೆ ಪಾದಾರ್ಪಣೆ

AIIMS  raichur
AIIMS raichur
Published on

ರಾಯಚೂರು ಏಮ್ಸ್ ಮಂಜೂರು ಮಾಡುವಂತೆ ಒತ್ತಾಯಿಸಿ ಏಮ್ಸ್ ಹೋರಾಟ ಸಮಿತಿಯಿಂದ ನಡೆಯುತ್ತಿರುವ ಅನಿರ್ಧಿಷ್ಠಾವದಿ ಧರಣಿ ನಾಲ್ಕನೇ ವರ್ಷಕ್ಕೆ ಮುಂದುವರೆದಿದ್ದು, ಈ ಹಿನ್ನೆಲೆಯಲ್ಲಿ ಮಂಗಳಾವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಹೋರಾಟ ಸಮಿತಿ ಸಂಚಾಲಕ ಡಾ.ಬಸವರಾಜ ಕಳಸ ಮಾತನಾಡಿ, ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆ ಮಾಡಬೇಕೆಂದು ಒತ್ತಾಯಿಸಿ ಕಳೆದ ಮೂರು ವರ್ಷಗಳಿಂದ ಹೋರಾಟ ಮಾಡಲಾಗುತ್ತಿದ್ದು, ಇಂದು ನಾಲ್ಕನೇ ವರ್ಷಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರ ಕೂಡಲೇ ಸರ್ವ ಪಕ್ಷಗಳ ನಿಯೋಗದೊಂದಿಗೆ ದೆಹಲಿಗೆ ತೆರಳಿ ಏಮ್ಸ್ ಮಂಜೂರು ಮಾಡಿಸಲು ಮುಂದಾಗಬೇಕು.

ಏಮ್ಸ್ ಹೋರಾಟ ಸಮಿತಿಯಿಂದ ನಿರಂತರವಾಗಿ ಕಲ್ಯಾಣ ಕರ್ನಾಟಕ ಭಾಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ರಾಯಚೂರಿನಲ್ಲಿಯೇ ಎಮ್ಸ್ ಸ್ಥಾಪನೆ ಮಾಡಬೇಕೆಂಬ ಒತ್ತಾಯದೊಂದಿಗೆ ಶಿಸ್ತುಬದ್ದವಾಗಿ ಹಾಗೂ ಕಾನೂನು ನಿಯಮಗಳನ್ನು ಪಾಲಿಸುತ್ತಾ ಸಾಕಷ್ಟು ಪ್ರತಿಭಟನೆಗಳನ್ನು ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಮ್ಸ್‌ಗಾಗಿ ಕೇಂದ್ರಕ್ಕೆ ಪತ್ರಬರೆದಿದ್ದು ಬಿಟ್ಟರೇ ಸರ್ಕಾರದ ಮಟ್ಟದಲ್ಲಿ ಯಾವುದೇ ಕೆಲಸಗಳು ಆಗಿಲ್ಲ. ಕೂಡಲೇ ರಾಜ್ಯ ಸರ್ಕಾರ ಸಂಪುಟಸಭೆಯಲ್ಲಿ ರಾಯಚೂರಿನಲ್ಲಿಯೇ ಏಮ್ಸ್ ಸ್ಥಾಪನೆಯಾಗಬೇಕೆಂಬ ನಿರ್ಧಾರವನ್ನು ಕೈಗೊಂಡು ದೆಹಲಿಗೆ ಸರ್ವಪಕ್ಷಗಳ ನಿಯೋಗ ತೆರಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಸಂಚಾಲಕ ಅಶೋಕ ಜೈನ್, ಮಾಜಿ ಸೈನಿಕ ಸಂಘದ ಅಧ್ಯಕ್ಷ ಚನ್ನಾರೆಡ್ಡಿ, ಜಾನ್ ವೆಸ್ಲಿ, ವೀರಭದ್ರಯ್ಯ ಸ್ವಾಮಿ, ಗುರುರಾಜ ಕುಲಕರ್ಣಿ, ಬಸವರಾಜ್ ಮಿಮಿಕ್ರಿ, ಶಾರದಾ ಹುಲಿ ನಾಯಕ, ಮಹಾವೀರ, ರೂಪಾ ಶ್ರೀನಿವಾಸ ನಾಯಕ ಸೇರಿ ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net