ಏಮ್ಸ್ ಹೋರಾಟ ಸಾವಿರ ದಿನಕ್ಕೆ ಪಾದರ್ಪಣೆ!

AIIMS RAICHUR PROTEST
ಏಮ್ಸ್ ಹೋರಾಟ ಸಾವಿರ ದಿನಕ್ಕೆ ಪಾದರ್ಪಣೆ!
Published on

ರಾಯಚೂರು ಜಿಲ್ಲೆಗೆ ಏಮ್ಸ್ ಆಸ್ಪತ್ರೆ ಮಂಜೂರು ಮಾಡಲು ಒತ್ತಾಯಿಸಿ ನಡೆಸುತ್ತಿರುವ ಹೋರಾಟ ಬುಧವಾರ ೧೦೦೦ ದಿನನದ ಹಿನ್ನಲೆ ಬುಧವಾರ ನಗರದಲ್ಲಿ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಏಮ್ಸ್ ಘೋಷಣೆ ಮಾಡದಿರುವುದನ್ನು ಖಂಡಿಸಿ ಏಮ್ಸ್ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು.

ಈ ಪ್ರತಿಭಟನೆಯು ನಗರದ ಕರ್ನಾಟಕ ಸಂಘದಿAದ ವಿವಿಧ ವೃತ್ತದ ಮೂಲಕ ಸಾವಿರಾರು ಸಂಖ್ಯೆಯಲ್ಲಿ ಕನ್ನಡಪರ, ದಲಿತ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು, ಸಂಘ ಸಂಸ್ಥೆಗಳ ಮುಖಂಡರು ಭಾಗವಹಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷನೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.

ನಂತರ ಜಿಲ್ಲಾ ಕ್ರೀಡಾಂಗಣದ ಮುಂಭಾಗದ ವೇದಿಕೆಯಲ್ಲಿ ಸಮಿತಿಯ ಪ್ರಧಾನ ಸಂಚಾಲಕ ಬಸವರಾಜ ಕಳಸ ಮಾತನಾಡಿ, ಕೇಂದ್ರ ಸರ್ಕಾರ ಜಿ¯್ಲÉಯನ್ನು ನಿರ್ಲಕ್ಷಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಐದು ಬಾರಿ ಪತ್ರ ಬರೆದರೂ ಜನರ ಮನವಿಗೆ ಕವಡೆ ಕಾಸಿನ ಬೆಲೆ ಕೊಟ್ಟಿಲ್ಲ. ಕೇಂದ್ರದಲ್ಲಿ ರಾಜ್ಯವನ್ನು ಪ್ರತಿನಿಽಸಿರುವ ಸಂಸದರು, ಕೇಂದ್ರ ಸಚಿವರು ಹಾಗೂ ಬಿಜೆಪಿ ಮುಖಂಡರು ಜಿ¯್ಲÉಯ ಪರವಾಗಿ ಕೇಂದ್ರದ ಮೇಲೆ ಒತ್ತಡ ಹಾಕಿಲ್ಲ. ಬಿಜೆಪಿ ಮುಖಂಡರ ಕುತಂತ್ರದಿAದಾಗಿ ಏಮ್ಸ್ ಮಂಜೂರಾತಿ ವಿಳಂಬವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಪ್ರಹ್ಲಾದï ಜೋಶಿ, ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ, ಶೋಭಾ ಕರಂದ್ಲಾಜೆ, ಪ್ರಹ್ಲಾದï ಜೋಶಿ ಕಣ್ಣೊರೆಸುವ ತಂತ್ರ ಅನುಸರಿಸುತ್ತಿz್ದÁರೆ. ಕೇಂದ್ರ ಸರ್ಕಾರ ಕಲ್ಯಾಣ ಕರ್ನಾಟಕದ ಜನರನ್ನು ಇನ್ನು ಮರಳು ಮಾಡಲು ಸಾಧ್ಯವಿಲ್ಲ. ನಮ್ಮ ಬೇಡಿಕೆ ಈಡೇರಿಸುವವ ವರೆಗೂ ಹೋರಾಟ ಮುಂದುವರಿಯಲಿದೆ. ತಾಲ್ಲೂಕು ಮಟ್ಟದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕದ ಹೋರಾಟಗಾರ ಲಕ್ಷ್ಮಣ ದಸ್ತಿ, ಕಲಬುರಗಿಯ ಶರಣಬಸ್ಸಪ್ಪ ಅಪ್ಪ ಶಿಕ್ಷಣ ಸಂಸ್ಥೆಯ ಬಸವರಾಜ , ಹೋರಾಟಗಾರ ಆರ್.ಕೆ. ಹುಡಗಿ, ಏಮ್ಸï ಹೋರಾಟ ಸಮಿತಿಯ ಸಹ ಸಂಚಾಲಕ ಅಶೋಕ ಕುಮಾರ ಜೈನ್, ಜÁನ್ ವೆಸ್ಲಿ, ವಿನಯ ಕುಮಾರ ಚಿತ್ರಕಾರ, ಎಂ.ಆರ್.ಭೇರಿ ಅಶೋಕ ಕುಮಾರ ಜೈನ, ಜÁನ್ ವೆಸ್ಲಿ, ನರಸಪ್ಪ ಬಾಡಿಯಲï, ಬಸವರಾಜ ಮಿಮಿಕ್ರಿ, ಶಾಂತಗೌಡ ಸುಭೇದಾರï, ಅಮರೇಗೌಡ ಪಾಟೀಲ ಸೇರಿ ಅನೇಕರು ಇದ್ದರು.

Related Stories

No stories found.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net