ಎಐಕೆಎಂಸಿಸಿ ಯಿಂದ ರೋಗಿಗಳಿಗೆ ಹಣ್ಣು ವಿತರಣೆ

Z KERALA MUSLIM 1
Published on

ಮಡಿಕೇರಿ:

ಆಲ್ ಇಂಡಿಯಾ ಕೇರಳ ಮುಸ್ಲಿಂ ಕಲ್ಚರಲ್ ಸೆಂಟರ್ ನ ಮಡಿಕೇರಿ ಘಟಕದ ವತಿಯಿಂದ ೭೭ ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಎಐಕೆಎಂಸಿಸಿಯ ಮಡಿಕೇರಿ ಅಧ್ಯಕ್ಷ ಅಬ್ದುಲ್ ಗಫೂರ್ ಅವರ ನೇತೃತ್ವದಲ್ಲಿ ನಗರದ ಜಿಲ್ಲಾ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಮತ್ತು ಸಿಹಿಯನ್ನು ಹಂಚಿ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಲಾಯಿತು.

ಈ ಸಂದರ್ಭ ಜಿಲ್ಲಾ ಉಸ್ತುವಾರಿ ಭೋಸರಾಜು, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಡ ವೀಣಾ ಅಚ್ಚಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಕೆಪಿಸಿಸಿ ಸದಸ್ಯರಾದ ಕೆ.ಪಿ.ಚಂದ್ರಕಲಾ, ಹೆಚ್.ಎಸ್.ಚಂದ್ರಮೌಳಿ, ಕಾಂಗ್ರೆಸ್ ಜಿಲ್ಲಾ ವಕ್ತಾರ ತೆನ್ನಿರ ಮೈನಾ, ಮಡಿಕೇರಿ ಬ್ಲಾಕ್ ಅಧ್ಯಕ್ಷ ಹಂಸ ಕೊಟ್ಟಮುಡಿ, ಪ್ರಮುಖರಾದ ಯಾಕುಬ್ ಬಜಗುಂಡಿ, ಮೊಹಮ್ಮದ್ ಕೆ.ಕೆ, ನಾಸಿರ್ ಹಿಲ್‌ಟೌನ್, ಮುಸ್ತಫ, ಪುರಸಭೆ ಅಧ್ಯಕ್ಷ ರಾಕೇಶ್, ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಅಧ್ಯಕ್ಷ ಖಲೀಲ್ ಬಾಷ, ಸಂಘಟನೆಯ ಉಪಾಧ್ಯಕ್ಷ ನಿಸಾರ್, ಶಮೀರ್ ಮತ್ತಿತರರು ಈ ಸಂದರ್ಭ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net