ಏ.23ರಂದು ನಗರದಲ್ಲಿ ಯುಗಾದಿ ಕವಿಗೋಷ್ಠಿ: ಅಳಿಲು ಸೇವಾ ಬಳಗದ ಅಧ್ಯಕ್ಷ ರವಿಕಿರಣ ಮಾಹಿತಿ

Aililu Service Club press conference Mandya
Published on

ಮಂಡ್ಯ: ಅಳಿಲು ಸೇವಾ ಬಳಗದ ವತಿಯಿಂದ ಯುಗಾದಿ ಕಾವ್ಯ ಸಂಭ್ರಮದ ಅಂಗವಾಗಿ ಏ.23ರಂದು ನಗರದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ರಾಜ್ಯಮಟ್ಟದ ಯುಗಾದಿ ಕವಿಗೋಷ್ಠಿ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಳಗದ ಅಧ್ಯಕ್ಷ ರವಿಕಿರಣ ಹೇಳಿದರು.

ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಎಂ.ಬಾಬು ಉದ್ಘಾಟಿಸುವರು. ಎಸ್.ಬಿ ಎಜುಕೇಷನ್ ಟ್ರಸ್ಟ್‌ನ ಕಾರ್ಯದರ್ಶಿ ಡಾ.ಮೀರಾ ಶಿವಲಿಂಗಯ್ಯ ಅಧ್ಯಕ್ಷತೆ ವಹಿಸಲಿದ್ದು, ಸ್ಪಂದನ ಸಾಂಸ್ಕೃತಿಕ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಟಿ.ಸತೀಶ್ ಜವರೇಗೌಡ ಆಶಯ ನುಡಿಗಳನ್ನಾಡುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಕೆ.ಎಂ.ರೇಖಾ, ಜಾನಪದ ವಿದ್ವಾಂಸ ಡಾ.ಜೆ.ರಾಜು ಗುಂಡಾಪುರ ಭಾಗವಹಿಸಲಿದ್ದಾರೆ. ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ಸನ್ಮಾನಿಸಲಾಗುವುದು ಎಂದರು.

ಗೌರವಾಧ್ಯಕ್ಷ ಬಾಲಸುಬ್ರಮಣ್ಯ, ಪ್ರಧಾನ ಕಾರ್ಯದರ್ಶಿ ಹನುಮಂತಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net