

ಹಿರೇಬಾಗೇವಾಡಿ: ಎಲ್ಲ ಗ್ರಾಮಗಳ ಅಭಿವದ್ಧಿ ಮಾಡಿ ಬೆಳಗಾವಿ ಗ್ರಾಮೀಣ ಕ್ಷೇತ್ರ ಮಾದರಿ ಮಾಡುವುದೇ ನನ್ನ ಗುರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಗ್ರಾಮದಲ್ಲಿ ಜಿಲ್ಲಾಡಳಿತ, ಜಿಪಂ, ತಾಪಂ ಹಾಗೂ ಗ್ರಾಪಂ ಸಂಯುಕ್ತಾಶ್ರಯದಲ್ಲಿ ಸೋಮವಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಿರುವ ಭಾರತ ನಿರ್ಮಾಣ ರಾಜೀವ ಗಾಂಧಿ ಸೇವಾ ಕೇಂದ್ರ ಹಾಗೂ ಗ್ರಾಪಂ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿಗಳು ಬಲಿಷ್ಠಗೊಂಡರೆ ಮಹಾತ್ಮ ಗಾಂಧೀಜಿ ಅವರ ಭಾರತದ ಅಭಿವೃದ್ಧಿ ಕನಸು ನನಸಾಗುವುದು ಎಂದರು.
ಸಂಸದ ಜಗದೀಶ ಶೆಟ್ಟರ್ ಮಾತನಾಡಿ, ಚುನಾವಣೆ ಬಂದಾಗ ಮಾತ್ರ ರಾಜಕಾರಣ ಮಾಡಬೇಕು. ಅಭಿವದ್ಧಿ ದಷ್ಟಿಯಿಂದ ಚುನಾಯಿತ ಜನಪ್ರತಿನಿಧಿಗಳು ಸಾರ್ವಜನಿಕರೊಂದಿಗೆ ಕೈಜೋಡಿಸಿ ಕೆಲಸ ಮಾಡಿದರೆ ಕ್ಷೇತ್ರದ ಅಭಿವದ್ಧಿ ಸಾಧ್ಯ ಎಂದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, 52 ಲಕ್ಷ ರೂ. ವೆಚ್ಚದಲ್ಲಿ ಪಂಚಾಯಿತಿ ಕಟ್ಟಡ ನಿರ್ಮಿಸಲಾಗಿದೆ ಎಂದರು.
ಬಡೇಕೊಳ್ಳಿಮಠದ ಸದ್ಗುರು ನಾಗೇಂದ್ರ ಸ್ವಾಮೀಜಿ, ಅರಳಿಕಟ್ಟಿ ತೋಂಟೇಶ್ವರ ವಿರಕ್ತಮಠದ ಶಿವಮೂರ್ತಿ ಸ್ವಾಮೀಜಿ, ಮುತ್ನಾಳ ಕೇದಾರ ಪೀಠದ ಶಿವಾನಂದ ಶಿವಾಚಾರ್ಯರು, ಕಾದ್ರಿ ದರ್ಗಾ ಅಜ್ಜ ಅಶ್ರ್ ಪೀರಾ, ತಾರಿಹಾಳ ಅಡವಿ ಸಿದ್ದೇಶ್ವರ ಮಠದ ಅಡವೀಶ್ವರ ದೇವರು, ಜಾಲಿ ಕರೇಮ್ಮ ದೇವಸ್ಥಾನದ ಉಳವಪ್ಪಜ್ಜ, ಯುವಮುಖಂಡ ಮಣಾಲ ಹೆಬ್ಬಾಳ್ಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಸಿ. ಪಾಟೀಲ, ಗ್ರಾಪಂ ಅಧ್ಯಕ್ಷೆ ಸ್ಮಿತಾ ಪಾಟೀಲ, ಉಪಾಧ್ಯಕ್ಷೆ ಪುಷ್ಪವತಿ ನಾಯ್ಕರ, ಕೆಪಿಸಿಸಿ ಸದಸ್ಯ ಸುರೇಶ ಇಟಗಿ ಹಾಗೂ ಗ್ರಾಪಂ ಸದಸ್ಯರು ಇತರರಿದ್ದರು.