ಗುರಿ ಮುಟ್ಟಲು ನಿರಂತರ ಶ್ರಮ ಅಗತ್ಯ

13 SIRGUPPA 01
Published on

ಸಿರಗುಪ್ಪ: ನಮ್ಮ ಭವಿಷ್ಯ ನಮ್ಮ ಕೈಯಲ್ಲಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಹಾಗೂ ಬಾಲ ಸಾಹಿತ್ಯ ಪ್ರಶಸ್ತಿ ಪುರುಷ್ಕೃತ ಸಾಹಿತಿ ಕೆ.ಶಿವಲಿಂಗಪ್ಪ ಹಂದ್ಯಹಾಳ್ ಹೇಳಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಸ್ನೇಹ ಕೌಸ್ತುಭ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಗಳು ಗುರು-ಹಿರಿಯರ ಮಾರ್ಗದರ್ಶನದಲ್ಲಿ ನಡೆದು ಉನ್ನತ ಗುರಿ ಮುಟ್ಟಲು ನಿರಂತರ ಶ್ರಮವಹಿಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net