ವಾಹನ ಡಿಕ್ಕಿ, ಬೈಕ್ ಸವಾರ ಸಾವು

AML APAGATHA
Published on

ಐಮಂಗಲ: ಹೋಬಳಿಯ ಗುಯಿಲಾಳು ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭಾನುವಾರ ಬೆಳಗ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತನನ್ನು ತಮಿಳುನಾಡಿನ ದಿಂಡಗಲ್ ವಾಸಿ ಪಾಂಡಿರಾಜನ್ (46) ಎಂದು ಗುರುತಿಸಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸವಾರ, ಬೈಕ್ ಸಮೇತ ರಸ್ತೆ ಬದಿಯ ಚರಂಡಿಗೆ ಹೋಗಿ ಬಿದ್ದಿದ್ದಾನೆ. ಸ್ಥಳಕ್ಕೆ ಐಮಂಗಲ ಠಾಣೆ ಎಸ್‌ಐ ಎ. ಮಂಜುನಾಥ್, ಎಎಸ್‌ಐ ಶ್ರೀಶೈಲಪ್ಪ ಹಾಗೂ ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net