ಕಂದಿಕೆರೆಯಲ್ಲಿ ರಂಗನಾಥ ರಥೋತ್ಸವ

AML RATHOTHSAVA
Published on

ಐಮಂಗಲ: ಹೋಬಳಿಯ ಕಂದಿಕೆರೆ ಗ್ರಾಮದಲ್ಲಿ ರಂಗನಾಥ ಸ್ವಾಮಿ ರಥೋತ್ಸವ ಭಾನುವಾರ ಸಂಜೆ ಸಂಭ್ರಮದಿಂದ ಜರುಗಿತು.

ಪ್ರತಿ ವರ್ಷ ಭರತ ಹುಣ್ಣಿಮೆಯಲ್ಲಿ ಈ ಜಾತ್ರೆ ನಡೆಯುವುದು ವಿಶೇಷವಾಗಿದ್ದು, ಇದರ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಭಿಷೇಕ, ಕುಂಕುಮಾರ್ಚನೆ, ಮಹಾಮಂಗಳಾರತಿ ಮಾಡಲಾಯಿತು. ದೇವರ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು.

ಮೆರವಣಿಗೆ ಮೂಲಕ ಸಾಗಿ ಬಂದ ಉತ್ಸವ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದ ಬಳಿಕ ಉತ್ಸವಕ್ಕೆ ಚಾಲನೆ ನೀಡಲಾಯಿತು. ನೆರೆದಿದ್ದ ಭಕ್ತರು ರಥ ಎಳೆದು, ಕಳಸಕ್ಕೆ ಬಾಳೆ ಹಣ್ಣು ತೂರಿ ಭಕ್ತಿ ಸಮರ್ಪಿಸಿದರು.

ಶನಿವಾರ ಗಂಗಾಪೂಜೆಯೊಂದಿಗೆ ಆರಂಭಗೊಂಡ ಜಾತ್ರೆ, ದೇವಸ್ಥಾನದ ಧ್ವಜಾರೋಹಣ, ಚಕ್ರಾಂತಿ, ಉಂಡೆ ಮಂಡೆ, ಹರಕೆ ಕಾರ್ಯಕ್ರಮಗಳು ಜರುಗಿದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net