

ವಿಜಯವಾಣಿ ಸುದ್ದಿಜಾಲ ಬೆಂಗಳೂರು
ವಿಮಾನ ನಿಲ್ದಾಣದಲ್ಲಿ ತೆಗೆದುಕೊಳ್ಳುವ ಸುರಕ್ಷತಾ ವಿಷಯಗಳಲ್ಲಿ ಕೆಲವೊಂದು ಅತ್ಯಂತ ಸವಾಲಿನದ್ದಾಗಿರುತ್ತದೆ, ಈ ಹಿನ್ನೆಲೆಯಲ್ಲಿ ಸುರಕ್ಷತಾ ಸಲಕರಣೆಗಳ ಬಗ್ಗೆ ಸಾರ್ವಜನಿಕರಿಗೆ ಅಷ್ಟಾಗಿ ಮಾಹಿತಿ ಇರುವುದಿಲ್ಲ. ಹೀಗಾಗಿ ಸಾರ್ವಜನಿಕರಿಗೂ ಸುರಕ್ಷತಾ ಉಪಕರಣಗಳ ಮಾಹಿತಿ ನೀಡಲು 7 ದಿನಗಳ ವಾಯುಯಾನ ಭದ್ರತಾ ಸಂಸ್ಕೃತಿ ಸಪ್ತಾಹದಲ್ಲಿ ಸಾರ್ವಜನಿಕರಿಗೂ ಮುಕ್ತ ಅವಕಾಶ ನೀಡಲಾಗಿದೆ ಎಂದು ಬಿಸಿಎಎಸ್‌ನ ಪ್ರಾದೇಶಿಕ ನಿರ್ದೇಶಕ ರಾಜೀವ್ ಕುಮಾರ್ ರೈ ಹೇಳಿದರು.
ದೇವನಹಳ್ಳಿ ತಾಲೂಕು ಏರ್‌ಪೋರ್ಟ್ ಆವರಣದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಬ್ಯೂರೋ ಆ್ ಸಿವಿಲ್ ಏವಿಯೇಷನ್ ಸೆಕ್ಯೂರಿಟಿ ಸಹಯೋಗದೊಂದಿಗೆ ಆ.5ರವರೆಗೆ ಹಮ್ಮಿಕೊಂಡಿರುವ ವಾಯುಯಾನ ಭದ್ರತಾ ಸಂಸ್ಕೃತಿ ಸಪ್ತಾಹ ದಿನಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದರು. ಹಲವು ಮೂಲ ಉಪಕರಣ ತಯಾರಕರು ವಿಮಾನ ನಿಲ್ದಾಣಗಳ ಸುರಕ್ಷತಾ ಕ್ರಮಗಳನ್ನು ಹೆಚ್ಚಿಸುವ ಉತ್ಪನ್ನಗಳನ್ನು ಪ್ರದರ್ಶಿಸುತ್ತಿದ್ದಾರೆ. ವಿಮಾನಯಾನ ಭದ್ರತಾ ಅಭ್ಯಾಸಗಳು, ತಂತ್ರಗಳು ಮತ್ತು ವಿಮಾನಗಳಲ್ಲಿನ ಭದ್ರತಾ ಪ್ರಕ್ರಿಯೆಗಳ ಬಗ್ಗೆ ಪ್ರಯಾಣಿಕರಲ್ಲಿ ಜಾಗೃತಿ ಮೂಡಿಸುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದು ವಿವರಿಸಿದರು.