ಏರ್​ಪೋರ್ಟ್​ಗೆ 2 ಕಡೆ ಜಾಗ ಗುರುತು

Param_Airport
Published on

ತುಮಕೂರು: ರಾಜ್ಯದ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತುಮಕೂರು ಜಿಲ್ಲೆಯಲ್ಲಿ ನಿರ್ಮಿಸುವಂತೆ ಐಟಿ, ಬಿಟಿ ಸಚಿವರಿಗೆ ಮನವಿ ಮಾಡಲಾಗಿದ್ದು, ವಿಮಾನ ನಿಲ್ದಾಣ ನಿಮಾರ್ಣಕ್ಕೆ ಈಗಾಗಲೇ ಜಿಲ್ಲೆಯ ವಸಂತ ನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡಂತೆ ರಾಷ್ಟ್ರೀಯ ಹೆದ್ದಾರಿ 48ರ ಸಮೀಪ 3000 ಎಕರೆ ಹಾಗೂ ಶಿರಾ ತಾಲೂಕಿನ ಸೀಬಿ ದೇವಸ್ಥಾನದ ಸಮೀಪ 5000 ಎಕರೆ ಭೂಮಿ ಗುರುತಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಹೇಳಿದರು.

ಜಿಲ್ಲೆಯಲ್ಲಿ ಹೆಲಿಕಾಪ್ಟರ್​ ತಯಾರಿಕಾ ಘಟಕ ಕಾರ್ಯನಿರ್ವಹಿಸುತ್ತಿರುವ ಗುರುತಿಗಾಗಿ ನಗರದ ಹೃದಯಭಾಗದ ಬಿಜಿಎಸ್​ ವೃತ್ತದ ಪಕ್ಕದಲ್ಲಿ ಹೆಲಿಕಾಪ್ಟರ್​ ಮಾದರಿ ಇರಿಸಲಾಗುವುದು. ಪಾಲಿಕೆ ಆವರಣದಲ್ಲಿ ಡಾ.ಬಾಬಾ ಸಾಹೇಬ್​ ಅಂಬೇಡ್ಕರ್​ ಪುತ್ಥಳಿ ನಿರ್ಮಿಸುವ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ, ಸರ್ಕಾರದಿಂದ ಅನುಮತಿ ದೊರೆತ ನಂತರ ಪುತ್ಥಳಿ ಸ್ಥಾಪಿಸಲಾಗುವುದು. ಪುತ್ಥಳಿ ಸ್ಥಾಪನೆಗೆ ಶ್ರೀಸಿದ್ಧಾರ್ಥ ಸಂಸ್ಥೆಯಿಂದ 36 ಲಕ್ಷ ರೂ. ಕೊಡುಗೆಯಾಗಿ ನೀಡಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net