ಅಜಿತ್ ಕುಮಾರ್ ಕೆಆರ್‌ಎಸ್ ಜಿಲ್ಲಾಧ್ಯಕ್ಷ

ajith kumar
Published on

ಮಡಿಕೇರಿ: ಕರ್ನಾಟಕ ರಾಷ್ಟ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷರಾಗಿ ಎಂ.ಜಿ.ಅಜಿತ್ ಕುಮಾರ್‌ರನ್ನು ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ಕೇಶವ್ ಮೂರ್ತಿ ತಿಳಿಸಿದರು.


ಜಿಲ್ಲಾ ಉಪಾಧ್ಯಕ್ಷರಾಗಿ ಸಿ.ಜೆ.ಸತೀಶ್, ಪ್ರಧಾನ ಕಾರ್ಯದರ್ಶಿ ಎಚ್.ಡಿ.ದಿಲೀಪ್ ಕುಮಾರ್, ಕಾರ್ಯದರ್ಶಿಯಾಗಿ ಎನ್.ಬಿ.ಪ್ರದೀಪ್, ಎನ್.ಜೆ.ಗಿರೀಶ್ ಕುಮಾರ್, ಎನ್.ಎಸ್.ರಾಜಶೇಖರ್ ಗೌಡ, ಎ.ಎ.ಹುಸೇನ್ ಆಲೀರ ಅವರನ್ನು ಆಯ್ಕೆ ಮಾಡಲಾಗಿದೆ. ಈಗಾಗಲೇ ೧೦೦ಕ್ಕೂ ಅಧಿಕ ಯುವಕರು ಪಕ್ಷದ ಸದಸ್ಯತ್ವ ಪಡೆದುಕೊಂಡಿದ್ದಾರೆ ಎಂದರು.


ಸುದ್ದಿಗೋಷ್ಟಿಯಲ್ಲಿ ಪಕ್ಷದ ಉಪಾಧ್ಯಕ್ಷ ಸಿ.ಜಿ.ಸತೀಶ್, ಕಾರ್ಯದರ್ಶಿ ಎನ್.ಬಿ.ಪ್ರದೀಪ್, ಬೆಂಗಳೂರು ನಗರ ಕಾರ್ಯದರ್ಶಿ ನವೀನ್ ಕುಮಾರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net