

ಮಡಿಕೇರಿ: ೧೯೬೫ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ ಮಹಾವೀರ ಚಕ್ರ(ಮರಣೋತ್ತರ) ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ ೬೦ನೇ ಪುಣ್ಯಸ್ಮರಣೆ ಸೆ.೭ ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡವ ಮಕ್ಕಡ ಕೂಟ, ಅಜ್ಜಮಾಡ ಒಕ್ಕ(ಕುಟುಂಬಸ್ಥರ) ಹಾಗೂ ಸ್ವಾ.ಲೀ ಅಜ್ಜಮಾಡ ದೇವಯ್ಯ ಟ್ರಸ್ಟ್‌ನ ಸಹಯೋಗದಲ್ಲಿ ಬೆಳಗ್ಗೆ ೧೧ ಗಂಟೆಗೆ ಸ್ವಾ.ಲೀ ಅಜ್ಜಮಾಡ ಬಿ.ದೇವಯ್ಯ ವೃತ್ತದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಪುಣ್ಯಸ್ಮರಣೆಯನ್ನು ಆಚರಿಸಲಾಗುವುದು ಎಂದು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಕೊಡಗು-ಮೈಸೂರು ಸಂಸದರಾದ ಯದುವೀರ್ ಒಡೆಯರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ, ಹಿರಿಯ ರಾಜಕಾರಣಿ ಎಂ.ಸಿ.ನಾಣಯ್ಯ, ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್, ಮಾಜಿ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ, ಸ್ಕ್ವಾ.ಲೀ.ಅಜ್ಜಮಾಡ ಬಿ.ದೇವಯ್ಯ ಮೆಮೋರಿಯಲ್ ಟ್ರಸ್ಟ್‌ನ ಅಧ್ಯಕ್ಷ ಅಜ್ಜಮಾಡ ಕಟ್ಟಿ ಮಂದಯ್ಯ ಸೇರಿದಂತೆ ಕೊಡವ ಮಕ್ಕಡ ಕೂಟದ ಸದಸ್ಯರು, ನಿವೃತ್ತ ಯೋಧರು, ನಗರಸಭೆ ಸದಸ್ಯರು, ಅಭಿಮಾನಿಗಳು ಹಾಗೂ ಅಜ್ಜಮಾಡ ಕುಟುಂಬಸ್ಥರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.