

ಹುಕ್ಕೇರಿ: ತಾಲೂಕಿನ ಸಂಕೇಶ್ವರದ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಗೆ ಅಧ್ಯಕ್ಷರಾಗಿ ಅಜ್ಜಪ್ಪ ಕಲ್ಲಟ್ಟಿ ಮತ್ತು ಉಪಾಧ್ಯಕ್ಷರಾಗಿ ಅಶೋಕ ಪಟ್ಟಣಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು.
ಇತ್ತೀಚೆಗೆ ಕಾರ್ಖಾನೆ ಉಪಾಧ್ಯಕ್ಷ ಶ್ರೀಶೈಲಪ್ಪ ಮಗದುಮ್ಮ ನಿಧನರಾದರು. ಶಾಸಕ ನಿಖಿಲ ಕತ್ತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾಗಿದ್ದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ನೇತೃತ್ವದಲ್ಲಿ ಮಂಗಳವಾರ ಜರುಗಿದ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಅಜ್ಜಪ್ಪ ಕಲ್ಲಟ್ಟಿ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅಶೋಕ ಪಟ್ಟಣಶೆಟ್ಟಿ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ನಡೆಯಿತು.
ಕಾರ್ಖಾನೆ ಸಂಚಾಲಕರಾದ ಅಪ್ಪಾಸಾಹೇಬ ಶಿರಕೋಳಿ, ಪ್ರಭುದೇವ ಪಾಟೀಲ, ಬಸವರಾಜ ಮರಡಿ, ಸುರೇಂದ್ರ ದೊಡ್ಡಲಿಂಗನವರ, ಬಾಬಾಸಾಹೇಬ ಅರಬೋಳೆ, ಸುರೇಶ ಬೆಲ್ಲದ, ವ್ಯವಸ್ಥಾಪಕ ನಿರ್ದೇಶಕ ಎಸ್.ಆರ್.ಕರ್ಕಿನಾಯಿಕ, ಕಾರ್ಯಾಲಯ ಅಧೀಕ್ಷಕ ಸುಭಾಸ ನಾಶಿಪುಡಿ ಇತರರಿದ್ದರು.