

ಉಡುಪಿ: ರೋಗಗಳನ್ನು ಪತ್ತೆ ಹಚ್ಚಿ, ಉತ್ತಮ ಚಿಕಿತ್ಸೆ ನೀಡುವ ಜೊತೆಗೆ ಮಾನಸಿಕ ಸ್ಥ್ಯೆರ್ಯ ತುಂಬಬೇಕು. ಮಹಿಳೆಯರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದರಿಂದ ಕ್ಯಾನ್ಸರ್ ಹಾಗೂ ಇತರೆ ಕಾಯಿಲೆಗಳಿಗೆ ತುತ್ತಾಗುವುದನ್ನು ತಪ್ಪಿಸಬಹುದು ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ರಾಜ್ಯ ಶಾಖೆ ಆಡಳಿತ ಮಂಡಳಿ ಸದಸ್ಯ ವಿ.ಜಿ. ಶೆಟ್ಟಿ ಹೇಳಿದರು.
ಸೋಮವಾರ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಯುಜಿ.ಎವಿ ಹಾಲ್‌ನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ದೇರಳಕಟ್ಟೆ ಯೆನಪೋಯ ಮೆಡಿಕಲ್ ಕಾಲೇಜು ಸಹಯೋಗದೊಂದಿಗೆ ಉಚಿತ ಮಹಿಳಾ ಸ್ವಾಸ್ಥ್ಯ ಸಂರಕ್ಷಣಾ ತಪಾಸಣೆ ಹಾಗೂ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಎಸ್. ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಬಿ. ರತ್ನಾಕರ ಶೆಟ್ಟಿ, ರೆಡ್‌ಕ್ರಾಸ್ ಆಡಳಿತ ಮಂಡಳಿ ಸದಸ್ಯ ಟಿ. ಚಂದ್ರಶೇಖರ್ ಹಾಗೂ ಯುವ ರೆಡ್‌ಕ್ರಾಸ್ ಕಾರ್ಯಕ್ರಮಾಧಿಕಾರಿ ಪ್ರೊ. ಶೋಭಾ ಆರ್. ಹಾಗೂ ಕಾಲೇಜಿನ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.