

ಬಂಟ್ವಾಳ: ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆರಂಭೋತ್ಸವ ಶುಕ್ರವಾರ ನಡೆಯಿತು.
ಹೊಸದಾಗಿ ಶಾಲೆಗೆ ಸೇರ್ಪಡೆಯಾದ ಮಕ್ಕಳೂ ಸೇರಿದಂತೆ ಶಾಲಾ ಮಕ್ಕಳನ್ನು ಹೂವು ನೀಡಿ, ಬ್ಯಾಂಡ್ ಸೆಟ್ ಹಾಗೂ ಬಲೂನುಗಳ ಹಾರಾಟದ ಮೂಲಕ ಸ್ವಾಗತಿಸಲಾಯಿತು. ಬಳಿಕ ಎಸ್‌ಡಿಎಂಸಿ ಅಧ್ಯಕ್ಷ ಹರೀಶ್ ಮಾಂಬಾಡಿ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಪ್ರೇಮಲತಾ, ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಗಣೇಶ್ ಕಾಮಾಜೆ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಿಸಿದರು. ತರಬೇತುದಾರ ತಿಲಕ್ ಮಕ್ಕಳ ಮನೋವಿಕಾಸಕ್ಕೆ ಪೂರಕವಾಗಿ ಆಟ, ಮನರಂಜನೆ ಮೂಲಕ ಮಾಹಿತಿ ನೀಡಿದರು. ಹಳೇ ವಿದ್ಯಾರ್ಥಿಗಳ ಸಂಘ ಉಪಾಧ್ಯಕ್ಷ ಗುರುದತ್ತ ಹೆಗ್ಡೆ, ಕಾರ್ಯದರ್ಶಿ ಕಿಶೋರ್, ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.
ಮುಖ್ಯಶಿಕ್ಷಕಿ ಲಕ್ಷ್ಮೀ ಕೆ. ಸ್ವಾಗತಿಸಿ, ಸಹಶಿಕ್ಷಕಿ ತಾಹಿರಾ ವಂದಿಸಿ, ಸಹಶಿಕ್ಷಕಿ ಸುಶೀಲಾ ಲಿಂಗಪ್ಪ ಕಾರ್ಯಕ್ರಮ ನಿರ್ವಹಿಸಿದರು.