ಸಮೀಕ್ಷೆ ಪ್ರಯೋಜನ ಪಡೆಯಿರಿ

13 09 2025_BGR RURAL_PAGE_5A
ನೆಲಮಂಗಲದ ನಗರಸಭಾ ಕಾರ್ಯಾಲಯದಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಸಮೀೆ ಅರಿವು ಕುರಿತಾದ ಪೋಸ್ಟರ್​ ಅನ್ನು ಅಧ್ಯಕ್ಷ ಎನ್​.ಗಣೇಶ್​ ಬಿಡುಗಡೆ ಮಾಡಿದರು. ನಗರಸಭೆ ಉಪಾಧ್ಯಕ್ಷ ಜಿ.ಆನಂದ್​, ಸದಸ್ಯ ಸುನೀಲ್​ಮೂಡ್​, ಮುಖಂಡ ನರಸಿಂಹಮೂರ್ತಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಹಿಳಾ ಅಭಿವೃದ್ಧಿ ನಿರೀಕ್ಷಕಿ ವಿಜಯಕುಮಾರಿ ಇದ್ದರು.
Published on

ನೆಲಮಂಗಲ: ಲೈಂಗಿಕ ಅಲ್ಪಸಂಖ್ಯಾತರು ಸಂಟಿತರಾಗಿ ಸರ್ಕಾರದ ಸೌಲಭ್ಯ ಪಡೆದುಕೊಳ್ಳಬೇಕು ಎಂದು ನಗರಸಭೆ ಅಧ್ಯಕ್ಷ ಎನ್​.ಗಣೇಶ್​ ಅಭಿಪ್ರಾಯಪಟ್ಟರು. ನಗರಸಭಾ ಕಾರ್ಯಾಲಯದಲ್ಲಿ ಗುರುವಾರ ಲೈಂಗಿಕ ಅಲ್ಪಸಂಖ್ಯಾತರ ಸಮೀಕ್ಷೆ ಅರಿವು ಕುರಿತಾದ ಪೋಸ್ಟರ್​ ಬಿಡುಗಡೆ ಮಾಡಿ ಮಾತನಾಡಿದ ಅವರು, ಸಮಾಜದಲ್ಲಿ ಮಹಿಳೆಯರು, ಮಕ್ಕಳು ಹಾಗೂ ಹಿರಿಯ ನಾಗರಿಕರಂತೆ ಲೈಂಗಿಕ ಅಲ್ಪಸಂಖ್ಯಾತರು ಇದ್ದಾರೆ. ಅವರನ್ನು ಮಾನವೀಯ ಭಾವನೆಯಿಂದ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕಿದೆ. ನಗರ ಹಾಗೂ ತಾಲೂಕಿನಾದ್ಯಂತ ಇರುವ ಲೈಂಗಿಕ ಅಲ್ಪಸಂಖ್ಯಾತರು ಸಮೀೆಯ ಪ್ರಯೋಜನ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಹೇಳಿದರು.

ಸಂಟಿತರಾದಾಗ ಹಕ್ಕುಗಳನ್ನು ಪಡೆಯಲು ಸಾಧ್ಯ. ಸ್ವಾವಲಂಬಿಯಾಗಿ ಜೀವನ ನಡೆಸುವುದು ಸುಲಭದ ಕೆಲಸವಲ್ಲ. ಇತ್ತೀಚೆಗೆ ಸರ್ಕಾರ ಲೈಂಗಿಕ ಅಲ್ಪಸಂಖ್ಯಾತರನ್ನು ಗಮನಿಸುತ್ತಿದೆ. ಕೆಲ ಹಕ್ಕು ಮತ್ತು ಅವಕಾಶ ನೀಡಲು ಮುಂದಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ನೆ.ಯೋ.ಪ್ರಾಧಿಕಾರ ಮಾಜಿ ಅಧ್ಯಕ್ಷ ಎನ್​.ಪಿ.ಹೇಮಂತ್​ ಕುಮಾರ್​ ತಿಳಿಸಿದರು. ಲೈಂಗಿಕ ಅಲ್ಪಸಂಖ್ಯಾತರ ಸಾಮಾಜಿಕ, ಶೈಕ್ಷಣಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ ಮಾಡುವುದು, ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿರುವವರನ್ನು ಗುರುತಿಸುವ ಉದ್ದೇಶದಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲರು, ಹಿರಿಯನಾಗರಿಕರ ಸಬಲೀಕರಣ ಇಲಾಖೆ, ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಸಮೀಕ್ಷೆ ನಡೆಸಲಾಗುತ್ತಿದೆ. ಸೆ.15 ರಿಂದ ಅ.30 ವರೆಗೆ ಸಮೀಕ್ಷೆ ನಡೆಯಲಿದೆ. ಅರ್ಹರು ಸಮೀೆಯಲ್ಲಿ ಭಾಗಿಯಾಗಿ ಮಾಹಿತಿ ನೀಡಬಹುದು. ಸರ್ಕಾರದ ನಿರ್ದೇಶನದಂತೆ ಜನಪ್ರತಿನಿಧಿಗಳ ಗಮನಕ್ಕೆ ತಂದು ಸಮೀಕ್ಷೆ ಯಶಸ್ವಿಗೊಳಿಸಲಾಗುತ್ತಿದೆ. ನಗರ ಹಾಗೂ ತಾಲೂಕು ವ್ಯಾಪ್ತಿಯಲ್ಲಿ 604 ಲೈಂಗಿಕ ಅಲ್ಪಸಂಖ್ಯಾತರ ಬಗ್ಗೆ ಮಾಹಿತಿ ದೊರೆತಿದೆ. ಸಮೀಕ್ಷೆಯಲ್ಲಿ ವೈಯಕ್ತಿಕ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದು ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಹಿಳಾ ಅಭಿವೃದ್ಧಿ ನಿರೀಕ್ಷಕಿ ವಿಜಯಕುಮಾರಿ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net