

ಗಂಗೊಳ್ಳಿ: ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಆ.10ರಿಂದ 17ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಅಖಂಡ ಭಜನಾ ಸಪ್ತಾಹ ನಡೆಯಲಿದೆ. 10ರಂದು ಬೆಳಗ್ಗೆ ಮಹಾಪ್ರಾರ್ಥನೆ, 9.25ರ ಕನ್ಯಾ ಲಗ್ನ ಸುಮುಹೂರ್ತದಲ್ಲಿ ದೀಪ ಸ್ಥಾಪನಾಪೂರ್ವಕ ಅಖಂಡ ಭಜನಾ ಸಪ್ತಾಹ ಮಹೋತ್ಸವ ಆರಂಭಗೊಳ್ಳಲಿದೆ. 16ರಂದು ಸಂಜೆ 5 ಗಂಟೆಗೆ ನಗರ ಭಜನೆ, ರಾತ್ರಿ ವಿಶೇಷ ಪೂಜೆ, 17ರಂದು ದೀಪ ವಿಸರ್ಜನೆ, ಮಹಾಪೂಜೆ, ಸಮಾರಾಧನೆ, ಪ್ರಸಾದ ವಿತರಣೆ ಮತ್ತಿತರ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.