

ಪಾಂಡವಪುರ: ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ ಮಾನಸಿಕ ಅಸ್ವಸ್ಥ ಎಂದು ಅಖಿಲ ಕರ್ನಾಟಕ ಒಕ್ಕಲಿಗರ ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಸಿ.ಆರ್.ರಮೇಶ್ ಟೀಕಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಒಕ್ಕಲಿಗರು ಸಂಸ್ಕೃತಿ ಹೀನರು ಎಂದಿರುವ ವಿಚಾರವಾದಿ ಭಗವಾನ್ ಅರೆ ಹುಚ್ಚನಾಗಿದ್ದಾನೆ. ನಿಜವಾಗಿಯೂ ಆತ ಸಂಸ್ಕೃತಿ ಹೀನನಾಗಿದ್ದಾನೆ. ಮಾತ್ರವಲ್ಲದೆ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದ್ದಾನೆ. ಈ ಹಿಂದೆ ಮೂರ್ತಿ ಮೇಲೆ ಮೂತ್ರ ವಿಸರ್ಜನೆ ಮಾಡಿದರೆ ತಪ್ಪೇನು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ. ಈ ರೀತಿ ಪದೇ ಪದೇ ಪ್ರಚಾರಕ್ಕಾಗಿ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಆತನನ್ನು ಗಡಿಪಾರು ಮಾಡಬೇಕು. ಇಲ್ಲವೇ ಪ್ರಕರಣ ದಾಖಲಿಸಿ ಬಂಧಿಸಬೇಕು. ಅಂತೆಯೇ ಆತ ಭಗವಾನ್ ತಕ್ಷಣ ಒಕ್ಕಲಿಗ ಸಮುದಾಯವರಲ್ಲಿ ಕ್ಷಮೆ ಕೋರಬೇಕು. ಇಲ್ಲದಿದ್ದರೆ ಅವರ ವಿರುದ್ಧ ಒಕ್ಕಲಿಗರ ಒಕ್ಕೂಟದಿಂದ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.