ಮಹಿಳೆಯರ ಆರ್ಥಿಕ ಸಬಲಿಕರಣಕ್ಕೆ ಅಕ್ಕ ಕಫೆ ನೆರವು

4 Dwd 5
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ರಾಜ್ಯದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ರಾಷ್ಟ್ರೀಯ ಜೀವನೋಪಾಯ ಅಭಿಯಾನ ಅನುಷ್ಠಾನಗೊಳಿಸಲಾಗುತ್ತಿದೆ. ಅಭಿಯಾನದಡಿ ಸ್ವ ಸಹಾಯ ಗುಂಪುಗಳ ಮಹಿಳೆಯರೇ ನಿರ್ವಹಿಸಲು ಅವಕಾಶವಾಗುವಂತೆ ಅಕ್ಕ ಕಫೆ ರೂಪಿಸಲಾಗಿದೆ. ಮಹಿಳೆಯರ ಆರ್ಥಿಕ ಸಬಲೀರಣಕ್ಕೆ ಇದು ನೆವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಬಳಿಯ ಕಟ್ಟಡದಲ್ಲಿ ಕಬ್ಬೇನೂರ ಗ್ರಾಮದ ಕಾಮಧೇನು ಮಹಿಳಾ ಸ್ವ ಸಹಾಯ ಸಂಘ ಆರಂಭಿಸಿರುವ ಅಕ್ಕ ಕಫೆಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರನ್ನು ಸ್ವ ಸಹಾಯ ಗುಂಪುಗಳಡಿ ಸಂಘಟಿಸಿ, ಅವರಿಗೆ ಕೃಷಿ ಮತ್ತು ಕೃಷಿಯೇತರ ವಿಭಾಗಗಳಡಿ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಒದಗಿಸಲಾಗುತ್ತದೆ. ಪ್ರಮುಖವಾಗಿ ಮಹಿಳೆಯರು ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಂಡು ಜೀವನೋಪಾಯದೊಂದಿಗೆ ಸಬಲೀಕರಣದ ಬದುಕನ್ನು ರೂಪಿಸಿಕೊಳ್ಳುವಲ್ಲಿ ಅವಶ್ಯಕ ಸಾಮರ್ಥ್ಯಾಭಿವೃದ್ಧಿ ತರಬೇತಿಗಳನ್ನು ಏರ್ಪಡಿಸಲಾಗುತ್ತದೆ ಎಂದರು.

ನವಲಗು0ದ ಶಾಸಕ ಎನ್.ಎಚ್. ಕೋನರಡ್ಡಿ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ, ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಸಿಇಒ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಕಾಮಧೇನು ಮಹಿಳಾ ಸ್ವ ಸಹಾಯ ಸಂಘದ ಅಧ್ಯಕ್ಷೆ ರಾಜಶ್ರೀ ಪವಾಡಿ ಹಾಗೂ ವಿವಿಧ ಇಲಾಖೆಗಳ ಅಽಕಾರಿಗಳು, ಸ್ವ ಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net