

ಕಾರವಾರ: ಇಲ್ಲಿನ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ಎಸ್ ವೈದ್ಯ ನೂತನವಾಗಿ ನಿರ್ಮಾಣವಾಗಲಿರುವ "ಅಕ್ಕ ಕಫೆ" ನಿರ್ಮಾಣದ ಶಂಕು ಸ್ಥಾಪನೆ ಸೋಮವಾರ ನೆರವೇರಿಸಲಾಯಿತು.
ಕಡಿಮೆ ದರದಲ್ಲಿ ಶುಚಿ, ರುಚಿಯಾದ ಊಟ ಉಪಾಹಾರ ಒದಗಿಸುವುದರ ಜೊತೆಗೆ ಮಹಿಳೆಯರು ತಮ್ಮ ಸ್ವಾವಲಂಬಿ ಜೀವನ ನಡೆಸಲು ಹಾಗೂ ಉದ್ಯಮಶೀಲತೆಗೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ನಮ್ಮ ಸರಕಾರ ಈಗಾಗಲೇ ರಾಜ್ಯದಲ್ಲಿ 50 ಕಡೆಗಳಲ್ಲಿ ಅಕ್ಕ ಕಫೆಯನ್ನು ಸ್ಥಾಪಿಸಲು ತೀರ್ಮಾನಿಸಿದೆ.
ಈ ಸಂಧರ್ಭದಲ್ಲಿ ಕರ್ನಾಟಕ ರಾಜ್ಯ ಮಾರ್ಕೇಟಿಂಗ್ ಕನ್ಸಲೆಂಟ್ ಅಂಡ್ ಏಜೆನ್ಸಿಸ್ ಅಧ್ಯಕ್ಷ ಹಾಗೂ ಕಾರವಾರ ಅಂಕೋಲಾ ಕ್ಷೇತ್ರದ ಶಾಸಕ ಸತೀಶ್ ಕೆ ಸೈಲ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ, ವಿಧಾನ ಪರಿಷತ್ ಸದಸ್ಯ ಗಣಪತಿ ಡಿ ಉಳ್ವೇಕರ್, ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೆಕರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸತೀಶ್ ನಾಯ್ಕ, ಜಿಲ್ಲಾಧಿಕಾರಿ ಕೆ. ಲಕ್ಷಿö್ಮÃಪ್ರಿಯಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಯಣ ಎಂ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಮತ್ತಿತರರು ಉಪಸ್ಥಿತರಿದ್ದರು.