ಹುಬ್ಬಳ್ಳಿ: ಜಾಗತಿಕ ಲಿಂಗಾಯತ ಮಹಾಸಭಾ ಧಾರವಾಡ ಜಿಲ್ಲಾ ಮಹಿಳಾ ಘಟಕ, ಬಸವಕೇಂದ್ರ ಮಹಿಳಾ ಘಟಕದ ಸಹಯೋಗದಲ್ಲಿ ಕನ್ನಡದ ಪ್ರಥಮ ಕವಯಿತ್ರಿ, ಶಿವಶರಣೆ ಅಕ್ಕಮಹಾದೇವಿ ಜಯಂತಿ ಉತ್ಸವವನ್ನು ಏ. 13ರಂದು ಸಂಜೆ 4.30ಕ್ಕೆ ಗೋಕುಲ ರಸ್ತೆಯ ಅಕ್ಷಯಪಾರ್ಕ್ ಬ್ರೈಟ್ ಬಿಜಿನೆಸ್ ಸ್ಕೂಲ್ ಸಭಾಭವನದಲ್ಲಿ ಆಯೋಜಿಸಲಾಗಿದೆ.
ಬಸವಕೇಂದ್ರದ ಮಹಿಳಾ ಘಟಕದ ಅಧ್ಯಕ್ಷೆ ಸುನಿಲಾತಾಯಿ ಬ್ಯಾಹಟ್ಟಿ ಅಧ್ಯಕ್ಷತೆ ವಹಿಸುವರು. ಜಾಗತಿಕ ಲಿಂಗಾಯತ ಮಹಾಸಭಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸವಿತಾ ನಡಕಟ್ಟಿ ಕಾರ್ಯಕ್ರಮ ಉದ್ಘಾಟಿಸುವರು.
ಕಿತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ. ಪ್ರಜ್ಞಾ ಮತ್ತಿಹಳ್ಳಿ ಅನುಭಾವ ನೀಡುವರು. ಮಹಾಸಭಾ ಧಾರವಾಡ ಜಿಲ್ಲಾಧ್ಯಕ್ಷ ಎಂ.ವಿ. ಗೊಂಗಡಶೆಟ್ಟಿ, ಬಸವಕೇಂದ್ರದ ಅಧ್ಯಕ್ಷ ಪ್ರೊ. ಜಿ.ಬಿ. ಹಳ್ಳಾಳ ಉಪಸ್ಥಿತರಿರುವರು ಎಂದು ಗ್ರಂಥಪಾಲಕ ಡಾ. ಸುರೇಶ ಹೊರಕೇರಿ ತಿಳಿಸಿದ್ದಾರೆ.