ಚಿತ್ರಕಲಾ ಸ್ಪರ್ಧೆಯಲ್ಲಿ ಅಂಕಿತಾ ಪ್ರಥಮ

24 vpt 3
Published on

ವಿರಾಜಪೇಟೆ: ಸಮೀಪದ ಕಡಂಗ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ತುಂಬಾಕು ಸೇವನೆ ದುಷ್ಪರಿಣಾಮ ಕುರಿತು ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಅಂಕಿತಾ ಮಂಡಲ್ ಪ್ರಥಮ ಸ್ಥಾನ ಪಡೆದಿದ್ದಾಳೆ.


ಜಿಲ್ಲಾ ತುಂಬಾಕು ನಿಯಂತ್ರಣ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಗುರುವಾರ ಆಯೋಜಿಸಿದ್ದ ಸ್ಪರ್ಧೆಯಲ್ಲಿ ರಿಫಾ ಶೆರಿನ್(ದ್ವಿ) ಹಾಗೂ ಶಿಹಾನಾ(ತೃ) ಸ್ಥಾನ ಪಡೆದುಕೊಂಡರು. ವಿಜೇತರಿಗೆ ಗಣ್ಯರು ಬಹುಮಾನ ವಿತರಿಸಿದರು. ಶಿಕ್ಷಕರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net