ಬಿಸಿಯೂಟ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ

Akshara Dasoha protests were held in Mysore demanding an increase in the honorarium of the workers
Published on

ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಯುಟಿಯುಸಿ ಮತ್ತು ಅಕ್ಷರ ದಾಸೋಹ ಕಾರ್ಮಿಕರ ಸಂಘ, ಕಾವೇರಿ ಕ್ರಿಯಾ ಸಮಿತಿಯಿಂದ ನಗರದಲ್ಲಿ ಶನಿವಾರ ಪ್ರತ್ಯೇಕ ಪ್ರತಿಭಟನೆ ನಡೆಯಿತು.

ಬಿಸಿಯೂಟ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳಕ್ಕೆ ಆಗ್ರಹಿಸಿ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಎಐಯುಟಿಯುಸಿ ಹಾಗೂ ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ಪ್ರತಿಭಟನೆ ನಡೆಯಿತು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಸಿಯೂಟ ಕಾರ್ಯಕರ್ತೆಯರ ಗೌರವ ಧನವನ್ನು 6,000 ರೂ.ಗೆ ಏರಿಕೆ ಮಾಡಲಾ ಗುವುದು ಎಂದು ಕಾಂಗ್ರೆಸ್ ನಾಯಕರು ಚುನಾವಣಾ ಭರವಸೆ ನೀಡಿದ್ದರು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದ್ದು, ಈ ಬಾರಿಯ ಬಜೆಟ್‌ನಲ್ಲಿ ಬಿಸಿಯೂಟ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸುವ ಘೋಷಣೆ ಮಾಡಬೇಕು, ಬಿಸಿಯೂಟ ಕಾರ್ಯಕರ್ತೆಯರಿಗೆ ಸಮವಸ್ತ್ರ ನೀಡಬೇಕು ಎಂದು ಆಗ್ರಹಿಸಲಾಯಿತು. ಎಸ್‌ಐಯುಟಿಯುಸಿ ಖಜಾಂಚಿ ಸಂಧ್ಯಾ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಕಾವೇರಿ ಕ್ರಿಯಾ ಸಮಿತಿ: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬಾರದು ಎಂದು ಆಗ್ರಹಿಸಿ ಕಾವೇರಿ ಕ್ರಿಯಾ ಸಮಿತಿ ನಗರದ ಪುರಭವನ ಬಳಿ ಹಮ್ಮಿಕೊಂಡಿರುವ ಪ್ರತಿಭಟನೆ ಶನಿವಾರ 89ನೇ ದಿನವನ್ನು ಪೂರೈಸಿತು. ಸಮಿತಿ ಪದಾಧಿಕಾರಿಗಳಾದ ಎಸ್. ಜಯಪ್ರಕಾಶ್, ಎಂ.ಜೆ. ಸುರೇಶ್ ಗೌಡ, ಮೆಲ್ಲಳ್ಳಿ ಮಹಾದೇವಸ್ವಾಮಿ, ಎಚ್.ಕೆ. ರಾಮು, ತೇಜೇಶ್ ಲೋಕೇಶ್ ಗೌಡ ಹಾಗೂ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net