

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ವಿದ್ಯಾವರ್ಧಕ ಸಂಘವು ರಶ್ಮಿ ಮಂಜುನಾಥ ನಾಯಕ ದತ್ತಿ ನಿಮಿತ್ತ ಜೂ. 18ರಂದು ಸಂಜೆ 6 ಗಂಟೆಗೆ ರಾ.ಹ. ದೇಶಪಾಂಡೆ ಭವನದಲ್ಲಿ ಅಕ್ಷರ ಪ್ರಶಸ್ತಿ ಪ್ರದಾನ, ಉಪನ್ಯಾಸ ಹಾಗೂ ಬಡ ವಿದ್ಯಾಥಿರ್ಗಳಿಗೆ ಉಚಿತ ನೋಟ್ಬುಕ್ ವಿತರಣೆ ಏರ್ಪಡಿಸಲಾಗಿದೆ.
ದಾಂಡೇಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಡಾ. ವಿನಯಾ ಒಕ್ಕುಂದ ಅವರು "ಇಂದು ಮಕ್ಕಳ ಪೋಷಣೆಯಲ್ಲಿ ಪಾಲಕರ ಜವಾಬ್ದಾರಿಗಳು' ಕುರಿತು ಉಪನ್ಯಾಸ ನೀಡುವರು. ಅತಿಥಿಯಾಗಿ ನಿಂಗಣ್ಣ ಕುಂಟಿ ಆಗಮಿಸುವರು. ದತ್ತಿ ದಾನಿ ಕೆ.ಎಚ್. ನಾಯಕ ಉಪಸ್ಥಿತರಿರುವರು. ಪ್ರೊ. ಮಾಲತಿ ಪಟ್ಟಣಶೆಟ್ಟಿ ಅಧ್ಯಕ್ಷತೆ ವಹಿಸುವರು. ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಸ್ಫೂರ್ತಿ ತುರಾಯಿ ಅವರಿಗೆ ಅಕ್ಷರ ರಶ್ಮಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.