ಪ್ರತಿಯೊಬ್ಬರೂ ಮತದಾನ ಮಾಡಿ

16 Ylb 01
Published on

ಯಲಬುರ್ಗಾ: ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಗ್ರಾಪಂ ಪಿಡಿಒ ವೆಂಕಟೇಶ ನಾಯ್ಕ ಹೇಳಿದರು.

ಚಿಕ್ಕಮ್ಯಾಗೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸ್ವೀಪ್ ಜಾಗೃತಿ ಅಭಿಯಾನದಲ್ಲಿ ಮಾತನಾಡಿದರು. ಗ್ರಾಪಂ ವ್ಯಾಪ್ತಿಯಲ್ಲಿ ಶೇ.100 ಮತದಾನವಾಗಬೇಕು. ಹೀಗಾಗಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಹಕ್ಕು ಚಲಾಯಿಸಬೇಕು. 80 ವರ್ಷ ಮೇಲ್ಪಟ್ಟವರು, ಅಂಗವಿಕಲರಿಗೆ ಮನೆಯಲ್ಲೇ ಮತದಾನ ಮಾಡಲು ಅವಕಾಶ ನೀಡಲಾಗಿದ್ದು, ಸದುಪಯೋಗ ಪಡೆದುಕೊಳ್ಳಬೇಕು ಎಂದರು. ತಾಲೂಕು ಐಇಸಿ ಸಂಯೋಜಕ ಶರಣಪ್ಪ ಹಾಳಕೇರಿ ಪ್ರತಿಜ್ಞಾವಿಧಿ ಬೋಧಿಸಿದರು. ಗ್ರಾಪಂ ಅಧ್ಯಕ್ಷೆ ಕೆಂಚವ್ವ ರಾಮಣ್ಣ ಹಿರೇಮನಿ, ಸದಸ್ಯ ಶರಣಕುಮಾರ ಅಮರಗಟ್ಟಿ, ಕಾರ್ಯದರ್ಶಿ ಹನುಮಂತಪ್ಪ ಕುರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net