ಅಳದಂಗಡಿ ಸಿಎ ಬ್ಯಾಂಕ್ ಬೃಹತ್ ರಕ್ತದಾನ ಶಿಬಿರ

Bel_Blood Camp
Published on

ಬೆಳ್ತಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ ಅಂಗವಾಗಿ ಬಳಂಜ ಗ್ರಾಮ ಪಂಚಾಯಿತಿ, ಪೆರೋಡಿತ್ತಾಯಕಟ್ಟೆ ಹಳೇ ವಿದ್ಯಾರ್ಥಿ ಸಂಘ, ಮೀಡಿಯಾ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ಪೆರೋಡಿತ್ತಾಯಕಟ್ಟೆಯಲ್ಲಿ ರಕ್ತದಾನ ಶಿಬಿರ ನಡೆಯಿತು.

ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ಉದ್ಘಾಟಿಸಿದರು. ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.

ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಎಂ.ಜನಾರ್ದನ್, ಉದ್ಯಮಿ ವಿಠಲ ಹೆಗ್ಡೆ, ಬಳಂಜ ಗ್ರಾ.ಪಂ. ಅಧ್ಯಕ್ಷೆ ಶೋಭಾ ಕುಲಾಲ್, ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಉಪಾಧ್ಯಕ್ಷ ಜನಾರ್ದನ, ಪೆರೋಡಿತ್ತಾಯಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಅರ್ಕಕೀರ್ತಿ ಹೆಗ್ಡೆ, ಶಿರ್ಲಾಲು ಸಿ.ಎ. ಬ್ಯಾಂಕ್ ಅಧ್ಯಕ್ಷ ನವೀನ್ ಕೆ.ಸಾಮಾನಿ, ಅಳದಂಗಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು, ಬಳಂಜ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ, ಪೆರೋಡಿತ್ತಾಯಕಟ್ಟೆ ಶಾಲಾ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ನೇಸರ, ಮುಖ್ಯಶಿಕ್ಷಕ ಬೆನೆಡಿಕ್ಟ್, ಅಳದಂಗಡಿ ಸಿಎ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೀರಾ, ನಿರ್ದೇಶಕರಾದ ಗುರುಪ್ರಸಾದ್ ಹೆಗ್ಡೆ, ವಿಶ್ವನಾಥ ಹೊಳ್ಳ, ಕೊರಗಪ್ಪ, ಹೇಮಂತ್, ದೇವಿಪ್ರಸಾದ್ ಶೆಟ್ಟಿ, ದಿನೇಶ್ ಪಿ.ಕೆ, ದೇಜಪ್ಪ ಪೂಜಾರಿ, ಧರ್ಣಪ್ಪ, ಸುಂದರಿ, ಮಮತಾ ಉಪಸ್ಥಿತರಿದ್ದರು.

ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ನಿರ್ದೇಶಕ ವಿಶ್ವನಾಥ ಹೊಳ್ಳ ಸ್ವಾಗತಿಸಿದರು. ಚಂದ್ರಹಾಸ್ ಬಳಂಜ ಕಾರ್ಯಕ್ರಮ ನಿರೂಪಿಸಿದರು. ಸಿಎ ಬ್ಯಾಂಕ್ ಸಿಬ್ಬಂದಿ ಸತೀಶ್ ಕೆ, ಭರತ್ ರಾಜ್, ಪ್ರಶಾಂತ್, ಜಗದೀಶ್, ಸಂತೋಷ್, ಮಮತಾ, ಶ್ರೀದೇವಿ, ಯತೀಶ್, ಹರೀಶ್, ಪ್ರವೀಣ್, ದಿನೇಶ್, ಡೀಕಯ್ ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net