ಪಟ್ಟಾಭಿಷೇಕ ರಜತ ಮಹೋತ್ಸವ ಸಂಭ್ರಮ

arasa
Published on

ಬೆಳ್ತಂಗಡಿ: ಪಟ್ಟಾಭಿಷೇಕ ರಜತ ಮಹೋತ್ಸವ ಸಂಭ್ರಮದಲ್ಲಿರುವ ಅಳದಂಗಡಿ ಅರಮನೆಯ ತಿಮ್ಮಣ್ಣರಸ ಡಾ.ಪದ್ಮಪ್ರಸಾದ್ ಅಜಿಲ ಅವರಿಗೆ ಮಂಗಳವಾರ ಗಣ್ಯರು ಗೌರವಾರ್ಪಣೆ ಸಲ್ಲಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಪರವಾಗಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭ ಸಂದೇಶದೊಂದಿಗೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹಷೇರ್ಂದ್ರ ಕುಮಾರ್ ಅಜಿಲರಿಗೆ ಗೌರವಾರ್ಪಣೆ ಸಲ್ಲಿಸಿದರು.

ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕ ಕೆ.ಪ್ರಭಾಕರ ಬಂಗೇರ, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಮೋಹನ್ ಆಳ್ವ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಜಿಪಂ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಮಮತಾ ಎಂ.ಶೆಟ್ಟಿ, ತಾಪಂ ಸದಸ್ಯ ಸುಧೀರ್ ಸುವರ್ಣ, ಉದ್ಯಮಿಗಳಾದ ಶಶಿಧರ ಶೆಟ್ಟಿ ನವಶಕ್ತಿ, ಪದ್ಮಶೇಖರ್ ಜೈನ್, ಪಡ್ಯಾರಬೆಟ್ಟು ಕೊಡಮಣಿತ್ತಾಯ ದೈವಸ್ಥಾನ ಆಡಳಿತ ಮೊಕ್ತೇಸರ ಜೀವಂಧರ್ ಜೈನ್, ಅಳದಂಗಡಿ ಚರ್ಚ್ ಧರ್ಮಗುರು ಅನಿಲ್ ಲೋಬೊ, ಧರ್ಮಾಧಿಕಾರಿ ಡಾ.ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ, ಪಟ್ಟಾಭಿಷೇಕ ರಜತ ಸಂಭ್ರಮಾಚರಣೆ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಸಾರ್ವಜನಿಕರು ಗೌರವ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net