ಆಲಡ್ಕ ನೂಜಿ ಸರ್ಕಾರಿ ಶಾಲೆ ಉನ್ನತೀಕರಣ

kon (1)
Published on

ಕೊಕ್ಕರ್ಣೆ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲಡ್ಕ ನೂಜಿ ಶಾಲೆಯು ಹಿರಿಯ ಪ್ರಾಥಮಿಕ ಶಾಲೆಯಾಗಿ ಉನ್ನತೀಕರಣಗೊಂಡಿದ್ದು 6-8ತರಗತಿಯನ್ನು ಶಾಸಕ ಯಶ್‌ಪಾಲ್ ಎ.ಸುವರ್ಣ ಶಾಲಾ ನಾಮಫಲಕವನ್ನು ಅನಾವರಣಗೊಳಿಸುವ ಮೂಲಕ ಉದ್ಘಾಟಿಸಿದರು.

ಕರ್ಜೆ ಗ್ರಾಪಂ ಅಧ್ಯಕ್ಷ ಇನಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಸುರೇಶ್ ಶೆಟ್ಟಿ ತಡಾಲು, ಕೊಕ್ಕರ್ಣೆ ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ಅಧ್ಯಕ್ಷ ಅಶೋಕ್‌ಕುಮಾರ್ ಶೆಟ್ಟಿ ಮೈರ್ಮಾಡಿ, ಬ್ರಹ್ಮಾವರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನಾ ಅಂಜುಂ, ಮಂದಾರ್ತಿ ಹೋಬಳಿ ಶಿಕ್ಷಣ ಸಂಯೋಜಕ ನಾಗರಾಜ ಭಟ್, ಗ್ರಾಪಂ ಮಾಜಿ ಅಧ್ಯಕ್ಷ ಸುಧಾ ಎಸ್.ಭಟ್, ಮಾಜಿ ಸದಸ್ಯ ರತ್ನಾಕರ ಶೆಟ್ಟಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವಿರಾಜ್ ಶೆಟ್ಟಿ ಕಿನ್ಮಾನ್ ಬೆಟ್ಟು, ಕಾರ್ಯದರ್ಶಿ ವಿಶ್ವನಾಥ ನಾಯ್ಕ ನೂಜಿ, ಎಸ್‌ಡಿಎಂಸಿ ಅಧ್ಯಕ್ಷ ಸುರೇಂದ್ರ ನಾಯ್ಕ ನೂಜಿ, ಉಪಾಧ್ಯಕ್ಷೆ ಪೂರ್ಣಿಮಾ, ಪಾಲಕರು, ಹಳೇ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮುಖ್ಯಶಿಕ್ಷಕ ರವಿ ಎಸ್.ಪೂಜಾರಿ ಸ್ವಾಗತಿಸಿದರು. ಶಕುಂತಲಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net