ಸ್ವಚ್ಛತೆ ಬದುಕಿನ ಭಾಗವಾಗಲಿ

bagless day
Published on

ವಿಜಯವಾಣಿ ಸುದ್ದಿಜಾಲ ದೊಡ್ಡಬಳ್ಳಾಪುರ
ವಿದ್ಯಾರ್ಥಿಗಳ ಜೀವನದಲ್ಲಿ ಶಿಸ್ತು, ಸಮಯ ಪಾಲನೆಯ ಜತೆಗೆ ಸ್ವಚ್ಛತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕು ಎಂದು ಆಲಹಳ್ಳಿ ಸರ್ಕಾರಿ ಶಾಲಾ ಮುಖ್ಯಶಿಕ್ಷಕ ರಂಗಶಾಮಯ್ಯ ತಿಳಿಸಿದರು.
ತಾಲೂಕಿನ ಆಲಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬ್ಯಾಗ್ ರಹಿತದ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಪೌಷ್ಟಿಕತೆ, ಸ್ವಾಸ್ಥ್ಯ ಮತ್ತು ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳು ಇತ್ತೀಚಿನ ದಿನಗಳಲ್ಲಿ ಪೌಷ್ಟಿಕಾಂಶಯುಕ್ತ ಆಹಾರದಿಂದ ದೂರ ಸರಿದು, ಜಂಕ್ ಫುಡ್‌ಗಳತ್ತ ಮುಖ ಮಾಡುತ್ತಿದ್ದಾರೆ. ಇದರಿಂದ ಪಾಲಕರು ಮಕ್ಕಳಿಗೆ ಸಾಧ್ಯವಾದಷ್ಟು ಹಣ್ಣು, ತರಕಾರಿ ಸೇರಿ ಪೌಷ್ಟಿಕಾಂಶಯುಕ್ತ ಆಹಾರ ನೀಡಬೇಕು. ಜತೆಗೆ ಮಕ್ಕಳಿಗೆ ಸ್ವಚ್ಛತೆ ಕಾಪಾಡುವ ಬಗ್ಗೆ ಆಗಾಗೇ ತಿಳಿಸಬೇಕು. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಕಾಪಾಡುವ ಗುಣ ಮಕ್ಕಳಲ್ಲಿ ಬೆಳೆಸಬೇಕು ಎಂದರು.
ಶಾಲಾ ಶಿಕ್ಷಕ ಅರುಣ್ ಮಾತನಾಡಿ, ಬ್ಯಾಗ್ ರಹಿತ ದಿನದಂದು ನಾನಾ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳಿಗೆ ವಿವಿಧ ವಿಷಯಗಳ ಬಗ್ಗೆ ತಿಳಿಸಿಕೊಡಲಾಗುತ್ತಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net