ಕಲ್ಲಳ್ಳಿ ಆಂಜನೇಯ ಏತ ನೀರಾವರಿ ಯೋಜನೆ ಜಾರಿಗೆ ಆಗ್ರಹ

Alvandi Kallalli Anjaneya Irregation Figth Committee
ಅಳವಂಡಿ ಗ್ರಾಮದಲ್ಲಿ ಕಲ್ಲಳ್ಳಿ ಆಂಜನೇಯ ಏತ ನೀರಾವರಿ ಹೊರಾಟ ಸಮಿತಿ ಸಭೆ ಭಾನುವಾರ ಆಯೋಜಿಸಲಾಗಿತ್ತು.
Published on

ಅಳವಂಡಿ: ತುಂಗಭದ್ರಾ ನದಿಯಿಂದ ನಾಲೆ ನಿರ್ಮಿಸಿ ಕಲ್ಲಳ್ಳಿ ಆಂಜನೇಯ ಏತ ನೀರಾವರಿ ಯೋಜನೆ ಅನುಷ್ಠಾನಗೊಳಿಸಬೇಕು. ಈ ಮೂಲಕ ಹಟ್ಟಿ, ಹೈದರನಗರ, ಕ್ಯಾಸಲಾಪೂರ, ಹಲವಾಗಲಿ, ಭೈರಾಪುರ, ಚೊಚನಹಳ್ಳಿ ಸೇರಿದಂತೆ ತರ ಕೆಲವು ಗ್ರಾಮಗಳಿಗೆ ನೀರಾವರಿ ಕಲ್ಪಿಸಬೇಕೆಂದು ಆಗ್ರಹಿಸಿ ಭಾನುವಾರ ಹೋರಾಟ ಸಮಿತಿ ಅಸ್ತಿತ್ವಕ್ಕೆ ತರಲಾಗಿದೆ.

ತಾಲೂಕು ವ್ಯಾಪ್ತಿಯಲ್ಲಿ ಸಿಂಗಟಾಲೂರು ಹಾಗೂ ಬೆಟಗೇರಿ ಏತ ನೀರಾವರಿ ಯೋಜನೆ ಜಾರಿಗೊಳಿಸಿದ್ದು ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ. ಈ ಎರಡೂ ಯೋಜನೆಗಳ ವ್ಯಾಪ್ತಿಯಿಂದ ಹೊರಗಿರುವ ಗ್ರಾಮಗಳ ಸುಮಾರು ನಾಲ್ಕು ಸಾವಿರ ಎಕರೆ ಜಮೀನಿಗೆ ಕಲ್ಲಳ್ಳಿ ಆಂಜನೇಯ ಏತ ನೀರಾವರಿ ಯೋಜನೆಯಿಂದ ಅನುಕೂಲವಾಗಲಿದೆ. ಇದರಿಂದಾಗಿ ಕಬ್ಬು, ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಹಾಗೂ ವಿವಿಧ ತರಕಾರಿ ಬೆಳೆಗಳನ್ನು ಬೆಳೆಯಬಹುದು ಎಂದು ಎಂದು ಸಮಿತಿ ಪದಾಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net