ಕ್ಷಯಮುಕ್ತ ಜಿಲ್ಲೆಗೆ ಸರ್ವರ ಸಹಕಾರ ಅಗತ್ಯ

24ALD01
Published on

ಅಳವಂಡಿ: ಮುಂದಿನ 2025ನೇ ಇಸ್ವಿಯೊಳಗೆ ಜಿಲ್ಲೆಯನ್ನು ಕ್ಷಯರೋಗ ಮುಕ್ತ ಜಿಲ್ಲೆಯನ್ನಾಗಿಸಲು ಸರ್ವರೂ ಸಹಕಾರ ನೀಡಬೇಕು ಎಂದು ಕೊಪ್ಪಳ ಜಿಲ್ಲಾ ಕ್ಷಯ ನಿರ್ಮೂಲನಾ ಕಚೇರಿಯ ಅಧಿಕಾರಿ ಇಬ್ರಾಹಿಂ ತಿಳಿಸಿದರು.

ಗ್ರಾಮದ ಶ್ರೀ ಸಿದ್ಧೇಶ್ವರ ಸಂಯುಕ್ತ ಪದವಿ ಪೂರ್ವ ವಿದ್ಯಾಲಯದ ಪ್ರೌಢಶಾಲೆ ವಿಭಾಗದಲ್ಲಿ ವಿಶ್ವ ಕ್ಷಯ ನಿರ್ಮೂಲನಾ ದಿನಾಚರಣೆ ಅಂಗವಾಗಿ ಶುಕ್ರವಾರ ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗಂಗಮ್ಮ ಕಳಸಾಪುರ ಮಾತನಾಡಿ, ಎರಡು ವಾರ ಹಾಗೂ ಅದಕ್ಕೂ ಹೆಚ್ಚಿನ ದಿನ ಸತತವಾಗಿ ಕೆಮ್ಮುತಿದ್ದರೆ, ಸಂಜೆ ಜ್ವರ ಬರುವುದು, ಎದೆಯಲ್ಲಿ ನೋವು, ತೂಕ ಕಡಿಮೆಯಾಗುವುದು, ಹಸಿವಾಗದಿರುವುದು, ಕಫದಲ್ಲಿ ರಕ್ತ ಬೀಳುವುದು, ಕತ್ತು ಹಾಗೂ ಕಂಕುಳಲ್ಲಿ ಗಡ್ಡೆ ಕ್ಷಯದ ಲಕ್ಷಣವಾಗಿದ್ದು, ರೋಗ ಪತ್ತೆ ಹಚ್ಚುವಿಕೆ ಹಾಗೂ ಚಿಕಿತ್ಸೆ ಸಂಪೂರ್ಣ ಉಚಿತವಾಗಿದೆ ಎಂದರು. ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ರವೀಂದ್ರ ಕಮ್ಮಾರ, ಸೈಯದ್ ಅಬ್ಬಾಸ, ಆರೋಗ್ಯ ಸುರಕ್ಷತಾಧಿಕಾರಿ ಸಾವಿತ್ರಿ ಹಂಚಿನಾಳ, ಹಿರಿಯ ಶಿಕ್ಷಕ ವಿ.ಎಚ್.ಪುಲೇಶಿ, ಶಿಕ್ಷಕ ನೀಲಪ್ಪ ಹಕ್ಕಂಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net