

ಅಳವಂಡಿ: ಒಬ್ಬರು ನೀಡಿದ ರಕ್ತದಿಂದ ಮೂರು ಜೀವ ಉಳಿಸಬಹುದು. 18ರಿಂದ 60 ವರ್ಷದೊಳಗಿನ ಆರೋಗ್ಯವಂತರು ರಕ್ತದಾನ ಮಾಡಬಹುದು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಚಂದ್ರಶೇಖರ ಮೇಟಿ ಹೇಳಿದರು.
ಗ್ರಾಮದಲ್ಲಿ ರಾಷ್ಟ್ರೀಯ ಸುರಕ್ಷತಾ ದಿನದ ನಿಮಿತ್ತ ವೈಬ್ರೆಂಟ್ ಸೋಲಾರ್, ವಿಂಡ್ ಕಂಪನಿ, ಪ್ರಾಥಮಿಕ ಆರೋಗ್ಯ ಕೇಂದ್ರ ಅಳವಂಡಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕೊಪ್ಪಳ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.
ಆರೋಗ್ಯವಂತ ಮನುಷ್ಯ ವರ್ಷದಲ್ಲಿ ಎರಡು ಬಾರಿ ರಕ್ತದಾನ ಮಾಡಬಹುದು. ಅಪಘಾತ, ಹೆರಿಗೆ ಮುಂತಾದ ತುರ್ತು ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಇದೆ. ರಕ್ತದಾನ ಶ್ರೇಷ್ಠವಾದದ್ದು. ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.ಆರೋಗ್ಯ ನೀರಿಕ್ಷಣಾಧಿಕಾರಿ ರವೀಂದ್ರ ಕಮ್ಮಾರ, ಲ್ಯಾಬ್ ಟೆಕ್ನಿಶಿಯನ್ ನಾಗರಾಜ, ಭಾರತಿಯ ರೆಡ್‌ಕ್ರಾಸ್ ಸಂಸ್ಥೆಯ ದೇವೇಂದ್ರಪ್ಪ, ವೈಬ್ರೆಂಟ್ ಸೋಲಾರ್ ಮತ್ತು ವಿಂಡ್ ಕಂಪನಿ ಸಿಬ್ಬಂದಿ ಇದ್ದರು.