ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ

Untitled design (5)
Published on

ಅಳವಂಡಿ: ಸರ್ಕಾರ ಮಕ್ಕಳ ಶಿಕ್ಷಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ಸದುಪಯೋಗಪಡಿಸಿಕೊಂಡು ಶಿಕ್ಷಣವಂತರಾಗಬೇಕು ಎಂದು ಮುಖ್ಯ ಶಿಕ್ಷಕ ಗುರುರಾಜ ಪಾಟೀಲ ತಿಳಿಸಿದರು.

ಸಮೀಪದ ನಿಲೋಗಿಪುರ ಗ್ರಾಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಯಿಂದ ಹಮ್ಮಿಕೊಂಡಿದ್ದ ವಿಶೇಷ ದಾಖಲಾತಿ ಆಂದೋಲನದ ಜಾಗೃತಿ ಜಾಥಾಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ಅನುಭವಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಮಕ್ಕಳಿಗೆ ಉಚಿತವಾಗಿ ಪಠ್ಯಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ, ಶೂ, ಸಾಕ್ಸ್, ಹಾಲು, ರಾಗಿಮಾಲ್ಟ, ಮೊಟ್ಟೆಗಳನ್ನು ವಿತರಿಸಲಾಗುತ್ತಿದೆ. ಪಾಲಕರು 5 ವರ್ಷ 5 ತಿಂಗಳು ತುಂಬಿದ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ದಾಖಲಿಸಿ, ವಿದ್ಯಾವಂತರನ್ನಾಗಿ ಮಾಡಬೇಕು ಎಂದರು

ಕಳಸ, ಕುಂಭ ಹೊತ್ತ ಮಕ್ಕಳು ಶಿಕ್ಷಣದ ಮಹತ್ವ ಸಾರುವ ಬಿತ್ತಿಪತ್ರಗಳನ್ನು ಹಿಡಿದುಕೊಂಡು ಜಾಗೃತಿ ಮೂಡಿಸಿದರು. ವಿವಿಧ ಸ್ವಾತಂತ್ರೃ ಹೋರಾಟಗಾರರ ಹಾಗೂ ವಿವಿಧ ನಾಯಕರ ಛದ್ಮವೇಷಗಳನ್ನು ಧರಿಸಿ ಗಮನ ಸೆಳೆದರು.

ಶಿಕ್ಷಕರಾದ ವೆಂಕರಡ್ಡಿ ನಾಗರಳ್ಳಿ, ಬಸಪ್ಪ ಜೀರ, ಸಂಗಪ್ಪ ರಾಟಿ, ಮುತ್ತು ಬನ್ನಿಕೊಪ್ಪ, ಮಂಜುನಾಥ ತಗಡಿನಮನಿ, ಚನ್ನಪ್ಪ ಕುರಿಗಾರ, ನಾಗಪ್ಪ ಶಿರನಹಳ್ಳಿ, ಚಂದ್ರಶೇಖರಯ್ಯ, ಗಂಗವ್ವ ಮಾಗಳ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net