ಶಾಲೆಗಳ ಅಭಿವೃದ್ಧಿಯಲ್ಲಿ ಜನರ ಸಹಕಾರವಿರಲಿ

19ALD04
Published on

ಅಳವಂಡಿ: ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ, ಮಾನಸಿಕವಾಗಿ ಚುರುಕುಗೊಳಿಸುತ್ತದೆ. ಇದರಿಂದ ಅಭ್ಯಾಸ ಮಾಡಲು ಉತ್ಸಾಹ ಬರಲಿದೆ. ಅಲ್ಲದೆ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದು ಪಿಡಿಒ ಅನಿತಾ ಕಿಲ್ಲೇದ ಹೇಳಿದರು.

ಕವಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ(ಡಿಪಿಇಪಿ) ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಿದ ಆಟದ ಮೈದಾನದಲ್ಲಿ ಖೋಖೋ ಹಾಗೂ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಮಂಗಳವಾರ ಮಾತನಾಡಿದರು.

ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಸರ್ಕಾರದ ಜತೆಗೆ ಸಾರ್ವಜನಿಕರು, ಜನಪ್ರತಿನಿಧಿಗಳ ಪಾತ್ರ ಮುಖ್ಯವಾಗಿದೆ. ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು. ಸೋಲು-ಗೆಲುವನ್ನು ಲೆಕ್ಕಿಸಬಾರದು ಎಂದರು.

ಗ್ರಾಪಂ ಅಧ್ಯಕ್ಷೆ ಮಲ್ಲಮ್ಮ ಬಿಸರಳ್ಳಿ, ಉಪಾಧ್ಯಕ್ಷೆ ಅನ್ನಪೂರ್ಣ ಪೂಜಾರ, ಕಾರ್ಯದರ್ಶಿ ಜಣ್ಣಜಂಬಣ್ಣ, ಪ್ರಮುಖರಾದ ಶರಣಪ್ಪ ಯರಾಶಿ, ಮುತ್ತಯ್ಯ ಲಿಂಬಿಕಾಯಿಮಠ, ಸಣ್ಣಭರಮಪ್ಪ, ಅಶೋಕ, ಲಕ್ಷ್ಮಣ, ಪ್ರಭು ಸುಂಕಣ್ಣವರ, ಚನ್ನಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net