

ಅಳವಂಡಿ: ಸಮೀಪದ ಬೇಳೂರು, ಹಿರೇಸಿಂದೋಗಿ, ಯತ್ನಟ್ಟಿ ಹಾಗೂ ಕಲಿಕೇರಿ ಗ್ರಾಮಗಳಲ್ಲಿ ಅಂದಾಜು ಮೊತ್ತ 5 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಬುಧವಾರ ಅಡಿಗಲ್ಲು ನೆರವೇರಿಸಿದರು.
ಬಹದ್ದೂರ್ ಬಂಡಿ ನವಲಕಲ್ ಏತ ನೀರಾವರಿ ಯೋಜನೆಗೆ ಟ್ರೈಯಲ್ ರನ್ ಮಾಡಲಾಗುತ್ತಿದೆ. ಶೀಘ್ರದಲ್ಲೇ ಅಳವಂಡಿ-ಬೇಟಗೇರಿ ನೀರಾವರಿ ಯೋಜನೆಗೆ ಟ್ರೈಯಲ್ ರನ್‌ಗೆ ಚಾಲನೆ ನೀಡಲಾಗುವುದು. ಎರಡು ಯೋಜನೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿ ಕೈಗೆತ್ತಿಕೊಳ್ಳಲು 400 ಕೋಟಿ ರೂ. ಅನುದಾನ ಮಂಜೂರು ಆಗಿದೆ.
ಸಿಂಗಟಾಲೂರು ಏತ ನೀರಾವರಿ ಯೋಜನೆಯ ಜಿಲ್ಲಾ ವ್ಯಾಪ್ತಿಯ ಕಾಮಗಾರಿಯನ್ನು ಮಧ್ಯಪ್ರದೇಶ ಮಾದರಿಯಲ್ಲಿ ಮಾಡಲು ಅನುದಾನ ಮಿಸಲಿಟ್ಟು ಟೆಂಡರ್ ಕರೆಯಲಾಗಿತ್ತು. ಆದರೆ ಟೆಂಡರ್‌ನಲ್ಲಿ ಯಾರು ಕೂಡ ಭಾಗವಹಿಸದಿರುವುದರಿಂದ ಮರು ಟೆಂಡರ್ ಕರೆಯಲು ಸೂಚಿಸಲಾಗಿದೆ ಎಂದರು.
ಮಾಜಿ ಸಂಸದ ಸಂಗಣ್ಣ ಕರಡಿ, ಗ್ಯಾರಂಟಿ ಸಮಿತಿ ತಾಲೂಕ ಅಧ್ಯಕ್ಷ ಬಾಲಚಂದ್ರನ್ ಮುನಿರಾಬಾದ್, ಜಿಪಂ ಮಾಜಿ ಸದಸ್ಯ ಪ್ರಸನ್ನ ಗಡಾದ, ಪ್ರಮುಖರಾದ ಹನುಮರೆಡ್ಡಿ ಅಂಗನಕಟ್ಟಿ, ಗಾಳೆಪ್ಪ ಪೂಜಾರ, ವೆಂಕನಗೌಡ್ರ ಹಿರೇಗೌಡ್ರ, ಕೇಶವರೆಡ್ಡಿ, ನಿಂಗಪ್ಪ ಯತ್ನಟ್ಟಿ, ಗವಿ ಬೇಳೂರು, ನಗರಸಭೆ ಸದಸ್ಯ ಅಕ್ಬರ್ ಪಲ್ಟನ್ ಇತರರಿದ್ದರು.